ಕೋವಿಡ್-19: ಲಾಕ್ ಡೌನ್ ಸಂಬಂಧ ಏ. 18ರಂದು ಸರ್ವಪಕ್ಷ ಸಭೆ ಕರೆದಿರುವ ಮುಖ್ಯಮಂತ್ರಿ ಯಡಿಯೂರಪ್ಪ
ಕೋವಿಡ್ -19 ಪರಿಸ್ಥಿತಿ ಮತ್ತು ಲಾಕ್‌ಡೌನ್ ಹೇರುವ ಕುರಿತು ಚರ್ಚಿಸಲು ಈ ತಿಂಗಳ 18 ರಂದು ಸರ್ವಪಕ್ಷ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
Published: 13th April 2021 04:55 PM | Last Updated: 13th April 2021 04:55 PM | A+A A-

ಸಿಎಂ ಯಡಿಯೂರಪ್ಪ
ಬೀದರ್: ಕೋವಿಡ್ -19 ಪರಿಸ್ಥಿತಿ ಮತ್ತು ಲಾಕ್‌ಡೌನ್ ಹೇರುವ ಕುರಿತು ಚರ್ಚಿಸಲು ಈ ತಿಂಗಳ 18 ರಂದು ಸರ್ವಪಕ್ಷ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಬಸವಕಲ್ಯಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖಗವಸುಗಳನ್ನುಧರಿಸಿ ಸಾಮಾಜಿಕ ದೂರವನ್ನು ಕಾಪಾಡಿಕೊಳ್ಳುವ ಮೂಲಕ ಎರಡನೇ ಹಂತದಲ್ಲಿ ಸೋಂಕು ಉಲ್ಬಣವನ್ನು ನಿಯಂತ್ರಿಸುವಲ್ಲಿ ಜನರು ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.
ಮೇ 2 ರ ವೇಳೆಗೆ ಕೋವಿಡ್ ಎರಡನೇ ಅಲೆಯ ಸಕಾರಾತ್ಮಕ ಪ್ರಕರಣಗಳು ಉತ್ತುಂಗಕ್ಕೇರಬಹುದು ಎಂದು ತಜ್ಞರ ಸಮಿತಿ ವರದಿ ನೀಡಿದೆ ಎಂದು ಅವರು ಹೇಳಿದ್ದಾರೆ. ಆದರೆ, ಸದ್ಯ ಲಾಕ್‌ಡೌನ್ ಹೇರುವ ಪ್ರಸ್ತಾಪವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.