
ಸಿಎಂ ಯಡಿಯೂರಪ್ಪ
ಬೆಂಗಳೂರು: ಸಾರಿಗೆ ಸಿಬ್ಬಂದಿಗಳೊಂದಿಗೆ ಮಾತುಕತೆ ನಡೆಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಏ.13 ರಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಯಡಿಯೂರಪ್ಪ, ಕರ್ತವ್ಯಕ್ಕೆ ಗೈರಾದ ಸಾರಿಗೆ ಸಿಬ್ಬಂದಿಗಳನ್ನು ಕ್ಷಮಿಸೋದಿಲ್ಲ ಅವರಿಗೆ ವೇತನವನ್ನೂ ನೀಡುವುದಿಲ್ಲ. ಮಾತುಕತೆ ನಡೆಸುವ ಪ್ರಶ್ನೆಯೇ ಇಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ.
ಇದೇ ವೇಳೆ ಸಾರಿಗೆ ನೌಕರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನೂ ಹಿಂಪಡೆಯುವುದಿಲ್ಲ ಎಂದು ಸಿಎಂ ಹೇಳಿದ್ದಾರೆ. "ಹಬ್ಬದ ಸಂದರ್ಭದಲ್ಲಿ ಸಾರಿಗೆ ಸಿಬ್ಬಂದಿಗಳು ಜನರಿಗೆ ತೊಂದರೆ ಕೊಟ್ಟಿದ್ದಾರೆ, ಅವರನ್ನು ಕ್ಷಮಿಸುವುದಿಲ್ಲ. ನಾವು ಇನ್ನು ಬಗ್ಗುವುದಿಲ್ಲ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.