ಏ.18 ರಂದು ಕೋವಿಡ್ ಕುರಿತ ಚರ್ಚೆಗೆ ಸರ್ವಪಕ್ಷಗಳ ಸಭೆ: ಲಾಕ್ ಡೌನ್ ಬಿಟ್ಟು ಉಳಿದ ಕ್ರಮಗಳ ಬಗ್ಗೆ ಚರ್ಚಿಸಿ ನಿರ್ಧಾರ
ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ವಿಸ್ತರಿಸುತ್ತಿರುವ ಹಿನ್ನಲೆಯಲ್ಲಿ ಕೋವಿಡ್ ಕುರಿತ ಸಲಹೆ ಚರ್ಚೆಗೆ ಏ.18ರಂದು ಸರ್ವಪಕ್ಷಗಳ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಲಾಕ್ಡೌನ್ ಹೊರತುಪಡಿಸಿ ಉಳಿದ ಕ್ರಮಗಳ ಬಗ್ಗೆ ಚರ್ಚಿಸುವುದಾಗಿ ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
Published: 14th April 2021 11:17 AM | Last Updated: 14th April 2021 01:15 PM | A+A A-

ಸಿಎಂ ಯಡಿಯೂರಪ್ಪ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ವಿಸ್ತರಿಸುತ್ತಿರುವ ಹಿನ್ನಲೆಯಲ್ಲಿ ಕೋವಿಡ್ ಕುರಿತ ಸಲಹೆ ಚರ್ಚೆಗೆ ಏ.18ರಂದು ಸರ್ವಪಕ್ಷಗಳ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಲಾಕ್ಡೌನ್ ಹೊರತುಪಡಿಸಿ ಉಳಿದ ಕ್ರಮಗಳ ಬಗ್ಗೆ ಚರ್ಚಿಸುವುದಾಗಿ ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಏ.18ರ ಸಂಜೆ 4ಕ್ಕೆ ಸರ್ವಪಕ್ಷ ನಾಯಕರ ಸಭೆ ನಡೆಯಲಿದ್ದು, ಸಭೆಯಲ್ಲಿ ಮಹಾರಾಷ್ಟ್ರದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರತಿಪಕ್ಷಗಳ ನಾಯಕರ ಜೊತೆ ಚರ್ಚಿಸಿ ಅವರ ಸಲಹೆ ಪಡೆದು ಮುಂದುವರೆಯುತ್ತೇವೆ. ಮಂಗಳವಾರ ಇಲಾಖಾ ಅಧಿಕಾರಿಗಳು, ಉಳಿದ ಮುಖಂಡರ ಜೊತೆ ಚರ್ಚಿಸಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯದ ಏಳು ಜಿಲ್ಲೆಗಳ ನಗರಗಳು ಮತ್ತು ಮಣಿಪಾಲದಲ್ಲಿ ರಾತ್ರಿ ಕರ್ಪ್ಯೂ ಜಾರಿಗೊಳಿಸಲಾಗಿದೆ. ಅಗತ್ಯಬಿದ್ದರೆ, ಇನ್ನೂ ಒಂದೆರಡು ಜಿಲ್ಲೆಗಳಿಗೆ ರಾತ್ರಿ ಕರ್ಪ್ಯೂ ವಿಸ್ತರಿಸುವ ಕುರಿತು ಚಿಂತನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.