ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನು ದಾಸ್ತಾನು ಮಾಡಿಕೊಳ್ಳದೆ ಸಭೆ ನಡೆಸಿ ಏನೂ ಪ್ರಯೋಜನವಿಲ್ಲ: ಹೆಚ್‌ಡಿಕೆ
ಕೋವಿಡ್ ನಿಯಂತ್ರಿಸುವ ವಿಚಾರದಲ್ಲಿ ಸರ್ಕಾರಗಳಿಗೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ಆದರೆ, ಎಚ್ಚರಿಕೆಗಳನ್ನು ಕಡೆಗಣಿಸಿ, ನಾಗರಿಕರ ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ತೋರುವ ನಡೆಗಳು ಖಂಡನೀಯ.
Published: 14th April 2021 11:01 AM | Last Updated: 14th April 2021 01:14 PM | A+A A-

ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಕೋವಿಡ್ ನಿಯಂತ್ರಿಸುವ ವಿಚಾರದಲ್ಲಿ ಸರ್ಕಾರಗಳಿಗೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ಆದರೆ, ಎಚ್ಚರಿಕೆಗಳನ್ನು ಕಡೆಗಣಿಸಿ, ನಾಗರಿಕರ ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ತೋರುವ ನಡೆಗಳು ಖಂಡನೀಯ. ಸರ್ಕಾರಗಳು ಕನಿಷ್ಠ, ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನಾದರೂ ದಾಸ್ತಾನು ಮಾಡಿಕೊಳ್ಳಬೇಕು. ಅದಲ್ಲದೆ, ಸಭೆಗಳನ್ನು ನಡೆಸಿ ಏನೂ ಪ್ರಯೋಜನವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸರಣಿ ಟ್ವೀಟ್ ಮೂಲಕ ಕುಮಾರಸ್ವಾಮಿ ಯಡಿಯೂರಪ್ಪ ಅವರ ಸರ್ವಪಕ್ಷ ಸಭೆ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
"ಕೋವಿಡ್ ನಿಯಂತ್ರಣಕ್ಕಾಗಿ ಬಿಗಿ ಕ್ರಮ ಕೈಗೊಳ್ಳುವುದಾಗಿಯೂ, ಈ ಬಗ್ಗೆ ವಿಪಕ್ಷಗಳೊಂದಿಗೆ ಸಭೆ ನಡೆಸುವುದಾಗಿಯೂ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಆದರೆ, ಕೋವಿಡ್ ಚಿಕಿತ್ಸೆಗೆ ಬೇಕಾಗುವ ಮೂಲಸೌಕರ್ಯ ಹೊಂದಿಸಿಟ್ಟುಕೊಳ್ಳದ, ರೋಗದ ನಿಯಂತ್ರಣಕ್ಕೆ ವ್ಯವಸ್ಥೆ ಮಾಡಿಕೊಳ್ಳದ, ಎಚ್ಚರಿಕೆ ಕಡೆಗಣಿಸಿದ ಸರ್ಕಾರ ಯಾವ ಸಭೆ ನಡೆಸಿ ಏನು ಉಪಯೋಗ?
"ಕೇಂದ್ರ, ರಾಜ್ಯ ಸರ್ಕಾರಗಳಿಗೆ 2ನೇ ಅಲೆ ಕಾಣಿಸಿಕೊಳ್ಳುವ ಎಚ್ಚರಿಕೆಗಳಿದ್ದವು. ಅದನ್ನು ಗಂಭೀರವಾಗಿ ಪರಿಗಣಿಸಿದ್ದರೆ ಪರಿಸ್ಥಿತಿ ಹೀಗಾಗುತ್ತಿರಲಿಲ್ಲ. ಇದೆಲ್ಲದರ ಮಧ್ಯೆ ಕೋವಿಡ್ ಚಿಕಿತ್ಸೆಗೆ ಬಳಸಲಾಗುವ ರೆಮ್‌ಡಿಸಿವಿರ್ ಎಂಬ ಚುಚ್ಚು ಮದ್ದಿಗೆ ದೇಶದಲ್ಲಿ ಅಭಾವ ಸೃಷ್ಟಿಯಾಗಿದೆ. ಸೋಂಕಿತರಿಗೆ ಚಿಕಿತ್ಸೆಯೇ ಖಾತ್ರಿ ಇಲ್ಲದಂತಾಗಿದೆ.
"ರೆಮ್‌ಡಿಸಿವಿರ್ ಚುಚ್ಚುಮದ್ದನ್ನು ಇಷ್ಟ ಬಂದಂತೆ ರಫ್ತು ಮಾಡಿದ್ದ ಕೇಂದ್ರ ಸರ್ಕಾರವು ಟೀಕೆಗಳು ಬರುತ್ತಲೇ, ಔಷಧಿಗೆ ಅಭಾವ ಎದುರಾಗುತ್ತಲೇ ರಫ್ತು ನಿಷೇಧಿಸಿದೆ. ಆದರೆ, ಈಗ ಕಾಲ ಮಿಂಚಿದೆ. ಒಂದೆಡೆ ಕೋವಿಡ್ ಪ್ರಕರಣಗಳು ದಿಢೀರ್ ಏರಿಕೆಯಾಗಿದೆ. ಆದರೆ, ದೇಶದ ಆಸ್ಪತ್ರೆಗಳು ರೆಮ್‌ಡಿಸಿವಿರ್‌ಗಾಗಿ ಕಾದು ಕೂರುವ ಪರಿಸ್ಥಿತಿ ಉದ್ಭವಿಸಿದೆ.
ಕೋವಿಡ್ ನಿಯಂತ್ರಣಕ್ಕಾಗಿ ಬಿಗಿ ಕ್ರಮ ಕೈಗೊಳ್ಳುವುದಾಗಿಯೂ, ಈ ಬಗ್ಗೆ ವಿಪಕ್ಷಗಳೊಂದಿಗೆ ಸಭೆ ನಡೆಸುವುದಾಗಿಯೂ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಆದರೆ, ಕೋವಿಡ್ ಚಿಕಿತ್ಸೆಗೆ ಬೇಕಾಗುವ ಮೂಲಸೌಕರ್ಯ ಹೊಂದಿಸಿಟ್ಟುಕೊಳ್ಳದ, ರೋಗದ ನಿಯಂತ್ರಣಕ್ಕೆ ವ್ಯವಸ್ಥೆ ಮಾಡಿಕೊಳ್ಳದ, ಎಚ್ಚರಿಕೆ ಕಡೆಗಣಿಸಿದ ಸರ್ಕಾರ ಯಾವ ಸಭೆ ನಡೆಸಿ ಏನು ಉಪಯೋಗ?
— H D Kumaraswamy (@hd_kumaraswamy) April 14, 2021
1/5
"ಈ ಮಧ್ಯೆ ರೆಮ್‌ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ, ನಕಲಿ ಔಷಧ ಪೂರೈಕೆಯಾಗುತ್ತಿರುವ ಪ್ರಕರಣಗಳು ವರದಿಯಾಗಿವೆ. ಒಂದೆಡೆ ಔಷಧದ ದಾಸ್ತಾನು ಮಾಡದೇ ವಿಫಲವಾಗಿರುವ ಸರ್ಕಾರ, ಕಾಳ ಸಂತೆ, ನಕಲಿ ಹಾವಳಿ ನಿಯಂತ್ರಿಸದೇ ಅದಕ್ಷತೆ ಮೆರೆದಿದೆ. ಇಲ್ಲಿ ಕೇಂದ್ರ, ರಾಜ್ಯ ಎಂಬ ಮಾತಿಲ್ಲ. ಎರಡೂ ಸರ್ಕಾರಗಳೂ ಕೋವಿಡ್ ವಿಷಯದಲ್ಲಿ ಎಡವಿವೆ. " ಎಂದು ಕುಮಾರಸ್ವಾಮಿ ಹೇಳಿದ್ದಾರೆ.