ಕೊರೋನಾ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಒಂದೇ ದಿನ ದಾಖಲೆಯ 14,738 ಪ್ರಕರಣ ಪತ್ತೆ, 66 ಜನ ಸಾವು!

ಕರ್ನಾಟಕದಲ್ಲಿ ಎರಡನೇ ಅಲೆ ಭೀಕರತೆ ಸೃಷ್ಟಿಸುತ್ತಿದ್ದು ಇದೇ ಮೊದಲ ಬಾರಿಗೆ 14,738 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 11,09,650ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕರ್ನಾಟಕದಲ್ಲಿ ಎರಡನೇ ಅಲೆ ಭೀಕರತೆ ಸೃಷ್ಟಿಸುತ್ತಿದ್ದು ಇದೇ ಮೊದಲ ಬಾರಿಗೆ 14,738 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 11,09,650ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 66 ಜನ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 13,112ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 10,497 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 5,12,521ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 30 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 3,591 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,99,958ಕ್ಕೆ ಏರಿಕೆಯಾಗಿದೆ. ಇನ್ನು 96,561 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 555 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com