ಸದಾಶಿವರಾವ ಬಾಪುಸಾಹೇಬ ಭೋಸಲೆ
ಸದಾಶಿವರಾವ ಬಾಪುಸಾಹೇಬ ಭೋಸಲೆ

ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಶಾಸಕ ಸದಾಶಿವರಾವ ಬಾಪುಸಾಹೇಬ ಭೋಸಲೆ ವಿಧಿವಶ

ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಶಾಸಕ ಹಾಗೂ ಅಪ್ಪಟ ಗಾಂಧಿವಾದಿಯಾಗಿದ್ದ ಸದಾಶಿವರಾವ ಬಾಪುಸಾಹೇಬ ಭೋಸಲೆ (101) ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಬೆಳಗಾವಿ: ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಶಾಸಕ ಹಾಗೂ ಅಪ್ಪಟ ಗಾಂಧಿವಾದಿಯಾಗಿದ್ದ ಸದಾಶಿವರಾವ ಬಾಪುಸಾಹೇಬ ಭೋಸಲೆ (101) ವಯೋಸಹಜ ಅನಾರೋಗ್ಯದಿಂದ ತಾಲ್ಲೂಕಿನ ಕಡೋಲಿ ಗ್ರಾಮದ ಸ್ವಗೃಹದಲ್ಲಿ ಗುರುವಾರ ಮುಂಜಾನೆ ನಿಧನರಾಗಿದ್ದಾರೆ. 

ಅವರಿಗೆ ಪುತ್ರ, ಸೊಸೆ, ಮಗಳು, ಅಳಿಯ ಹಾಗೂ ಮೊಮ್ಮಕ್ಕಳು ಇದ್ದಾರೆ. ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಲಿದೆ.

ಗಾಂಧೀಜಿ ಹಾಗೂ ವಿನೋಬಾ ಭಾವೆ ಅವರ ವಿಚಾರಧಾರೆಗಳನ್ನು ಪಾಲಿಸುತ್ತಿದ್ದರು. ಅವರಿಂದ ಪ್ರಭಾವಿತರಾಗಿ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದರು. 1946 (ಬ್ರಿಟಿಷ್ ಸರ್ಕಾರವು ಆಗ ಚುನಾವಣೆ ನಡೆಸಿತ್ತು.

ಆಗ ಬೆಳಗಾವಿಯು ಮುಂಬೈ ಪ್ರಾಂತ್ಯಕ್ಕೆ ಒಳ‍ಪಟ್ಟಿತ್ತು. ಬೆಳಗಾವಿ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಿದ್ದರು) ಹಾಗೂ 1952 (ಹಿರೇಬಾಗೇವಾಡಿ ಕ್ಷೇತ್ರದಿಂದ)ರಲ್ಲಿ ಎರಡು ಬಾರಿ ಶಾಸಕರಾಗಿದ್ದವರು. 

Related Stories

No stories found.

Advertisement

X
Kannada Prabha
www.kannadaprabha.com