ಕೋವಿಡ್ ಮಾರ್ಗಸೂಚಿ ಪಾಲನೆಯಾಗುತ್ತಿದೆಯೇ? ನಿಯಮ ಉಲ್ಲಂಘಿಸಿದವರಿಗೆ ದಂಡ ಹಾಕಲು ಪೊಲೀಸರು ಹಿಂಜರಿಯುತ್ತಿದ್ದಾರೆಯೇ?

ರಾಜ್ಯದಲ್ಲಿ ಸರ್ಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳು ಪಾಲನೆಯಾಗುತ್ತಿದೆಯೇ, ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗುತ್ತಿದೆಯೇ  ಎಂದು ಹೈಕೋರ್ಟ್ ಪ್ರಶ್ನಿಸಿದೆ. 
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳು ಪಾಲನೆಯಾಗುತ್ತಿದೆಯೇ, ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗುತ್ತಿದೆಯೇ, ನಿಯಮ ವನ್ನು ಕಡ್ಡಾಯವಾಗಿ ಪಾಲಿಸುವಂತೆ ಮಾಡಲು ಪೊಲೀಸರು ಬದ್ಧವಾಗಿದ್ದಾರೆಯೇ ಎಂದು ಹೈಕೋರ್ಟ್ ಪ್ರಶ್ನಿಸಿದೆ. 

ಲೆಟ್ಜ್ ಕಿಡ್ ಫೌಂಡೇಶನ್ ಹಾಗೂ ಮತ್ತೊಂದು ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಅರ್ಜಿ ವಿಚಾರಣೆ ನಡೆಸಿದ,ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ಸೂರಜ್ ಗೋವಿಂದ್ ರಾಜ್ ಅವರನ್ನೊಳಗೊಂಡ ವಿಭಾಗೀಯ ಪೀಠ, ನಿಯಮ ಪಾಲನೆಯಾಗುತ್ತಿದೆಯೇ ಎಂದು ಪರಿಶೀಲಿಸುವಂತೆ ರಾಜ್ಯದ ಡಿಡಿ ಮತ್ತು ಐಜಿಪಿಗಳಿಗೆ ಸೂಚಿಸಿದೆ.

ಹಿರಿಯ ಪೊಲೀಸ್ ಅಧಿಕಾರಿಗಳನ್ನೊಳಗೊಂಡ ತಂಡ ರಚಿಸಿ ನಿಯಮ ಉಲ್ಲಂಘಿಸಿದವರ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ತಿಳಿಸಿದೆ.  ಮಾಸ್ಕ್ ಧರಿಸಲಾಗುತ್ತಿದೆಯೇ, ಸಾರ್ವಜನಿಕ ಸಮಾರಂಭಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗುತ್ತಿದೆಯೇ ಎಂಬ ಬಗ್ಗೆ ಪರಿಶೀಲಿಸಲು ಸೂಚಿಸಿದೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳನ್ನು ಉಲ್ಲೇಖಿಸಿ, ನ್ಯಾಯಾಲಯವು, ನಿಯಮ ಉಲ್ಲಂಘಿಸಿದವರ ವಿರುದ್ಧ ಎಫ್‌ಐಆರ್ ದಾಖಲಿಸಲು  ಪೊಲೀಸರ್ ಅಧಿಕಾರಿಗಳು ಹಿಂಜರಿಯುತ್ತಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಕೋರ್ಟ್ ಈ ನಿರ್ದೇಶನ ನೀಡಿದೆ.

ಕೋವಿಡ್ ಮಾನದಂಡಗಳ ಉಲ್ಲಂಘನೆಯ ಸಂದರ್ಭದಲ್ಲಿ ರಾಜಕೀಯ ಮುಖಂಡರು ಮತ್ತು ಧಾರ್ಮಿಕ ಮುಖಂಡರಿಗೆ, ಸಾಮಾನ್ಯ ಜನರಿಗೆ ಅನ್ವಯವಾಗುವ ದಂಡದ ನಿಬಂಧನೆಗಳು ಅನ್ವಯವಾಗುತ್ತದೆ ಎಂದು ತಿಳಿಸಿದೆ. ಇನ್ನೂ ಸಾರಿಗೆ ನೌಕರರ ಪ್ರತಿಭಟನೆ ವೇಳೆಯೂ ಕೋವಿಡ್ ನಿಯಮ ಉಲ್ಲಂಘನೆಯಾಗುತ್ತಿದ್ದು. ಕಾನೂನಿಗೆ ಅನುಗುಣವಾಗಿ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಕೋರ್ಟ್ ನಿರ್ದೇಶನ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com