ಕುಂಭಮೇಳದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಮರಳುವ ಯಾತ್ರಿಗಳಿಗೆ ಕೊರೋನಾ ಪರೀಕ್ಷೆ ಕಡ್ಡಾಯ: ಸುಧಾಕರ್‌

ಹರಿದ್ವಾರದಲ್ಲಿ ನಡೆಯುತ್ತಿರುವ ಪವಿತ್ರ ಕುಂಭಮೇಳದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಮರಳುವ ಯಾತ್ರಿಗಳು ಕೊರೋನಾ ಪರೀಕ್ಷೆಗೆ ಕಡ್ಡಾಯವಾಗಿ ಒಳಪಡಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ.
ಸಚಿವ ಸುಧಾಕರ್
ಸಚಿವ ಸುಧಾಕರ್

ಬೆಂಗಳೂರು: ಹರಿದ್ವಾರದಲ್ಲಿ ನಡೆಯುತ್ತಿರುವ ಪವಿತ್ರ ಕುಂಭಮೇಳದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಮರಳುವ ಯಾತ್ರಿಗಳು ಕೊರೋನಾ ಪರೀಕ್ಷೆಗೆ ಕಡ್ಡಾಯವಾಗಿ ಒಳಪಡಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಹರಿದ್ವಾರದಲ್ಲಿ ನಡೆಯುತ್ತಿರುವ ಪವಿತ್ರ ಕುಂಭಮೇಳದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಮರಳುವ ಯಾತ್ರಿಗಳು ವಾಪಸ್ಸಾದ ಬಳಿಕ ಕಡ್ಡಾಯವಾಗಿ ತಮ್ಮ ಮನೆಗಳಲ್ಲಿ ಪ್ರತ್ಯೇಕಗೊಂಡು ಕೊರೊನಾ ಪರೀಕ್ಷೆಗೆ ಒಳಪಡಬೇಕು. ಕೊರೊನಾ ಪರೀಕ್ಷೆ ವರದಿಯಲ್ಲಿ ನೆಗಟೀವ್ ಬಂದ ನಂತರವಷ್ಟೇ ಯಾತ್ರಿಕರು ತಮ್ಮ ಎಂದಿನ ಕಾರ್ಯಗಳಲ್ಲಿ ತೊಡಗಬೇಕೆಂದು ಮನವಿ ಮಾಡುತ್ತೇನೆಂದು ಹೇಳಿದ್ದಾರೆ. 

ಹರಿದ್ವಾರದಲ್ಲಿ ನಡೆದ ಕುಂಭಮೇಳದಲ್ಲಿ ಭಾರೀ ಸಂಖ್ಯೆಯಲ್ಲಿ ಭಕ್ತಾಧಿಗಳು ಸೇರಿದ್ದರು. ಸುಮಾರು 5 ಲಕ್ಷ ಸಾಧುಗಳು ಈ ಮೇಳದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಈ ನಡುವೆ ಕಳೆದ 48 ಗಂಟೆಯಲ್ಲಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ಹರಿದ್ವಾರದಲ್ಲಿ ವರದಿಯಾಗಿವೆ.

ಈ ನಡುವೆ ಕುಂಭಮೇಳದಲ್ಲಿ ಕೋವಿಡ್ ನಿಯಮಗಳ ಸಂಪೂರ್ಣ ಉಲ್ಲಂಘನೆಯಾಗಿರುವುದು ಕಂಡು ಬಂದಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ. ಜನರು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಕೋವಿಡ್ ನಿಯಮಾವಳಿಗಳ ಉಲ್ಲಂಘನೆ ಮಾಡದ್ದಾರೆ. ಭಕ್ತರ ಈ ನಡೆ ಇದೀಗ ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com