ಕೋವಿಡ್-19: ರೆಮ್‌ಡಿಸಿವಿರ್ ಔಷಧ ಪೂರೈಕೆ ಹೊಣೆ ಎಸ್‌ಎಎಸ್‌ಟಿಗೆ ನೀಡಲಾಗಿದೆ- ಆರೋಗ್ಯ ಸಚಿವ ಕೆ ಸುಧಾಕರ್

ಕೊವಿಡ್-19 ಚಿಕಿತ್ಸೆಯಲ್ಲಿ ಬಳಕೆ ಮಾಡಲಾಗುತ್ತಿರುವ ರೆಮ್‌ಡಿಸಿವಿರ್ ಔಷಧದ ಸಮರ್ಪಕ ಪೂರೈಕೆ ಸಲುವಾಗಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (ಎಸ್‌ಎಎಸ್‌ಟಿ) ಅನ್ನು ನೋಡಲ್ ಏಜೆನ್ಸಿಯನ್ನಾಗಿ ನಿಯೋಜಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್‌ ತಿಳಿಸಿದ್ದಾರೆ.
ಸುಧಾಕರ್
ಸುಧಾಕರ್

ಬೆಂಗಳೂರು: ಕೊವಿಡ್-19 ಚಿಕಿತ್ಸೆಯಲ್ಲಿ ಬಳಕೆ ಮಾಡಲಾಗುತ್ತಿರುವ ರೆಮ್‌ಡಿಸಿವಿರ್ ಔಷಧದ ಸಮರ್ಪಕ ಪೂರೈಕೆ ಸಲುವಾಗಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (ಎಸ್‌ಎಎಸ್‌ಟಿ) ಅನ್ನು ನೋಡಲ್ ಏಜೆನ್ಸಿಯನ್ನಾಗಿ ನಿಯೋಜಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್‌ ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸುಧಾಕರ್ ಅವರು, 'ಸರ್ಕಾರಿ ಆಸ್ಪತ್ರೆಗಳಿಗೆ ಹಾಗೂ ಸರ್ಕಾರ ಶಿಫಾರಸ್ಸು ಮಾಡಿರುವ ಕೋವಿಡ್-19 ಸೋಂಕಿತರ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಿಗೆ ಅವಶ್ಯಕ ರೆಮ್‌ಡಿಸಿವಿರ್ ಔಷಧ ಸರಬರಾಜು ಮಾಡಲು ಎಸ್‌ಎಎಸ್‌ಟಿಗೆ ಹೊಣೆಗಾರಿಕೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಅಂತೆಯೇ ಸ್ವಯಂ ಪ್ರೇರಿತರಾಗಿ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಸೋಂಕಿತರ ಚಿಕಿತ್ಸೆಗೆ ರೆಮ್‌ಡಿಸಿವಿರ್ ಔಷಧ ಪೂರೈಸಲು ಉಪ ಔಷಧ ನಿಯಂತ್ರಕರಾದ ಕೆಂಪಯ್ಯ ಸುರೇಶ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಸೋಂಕಿತರ ಎಸ್‌ಆರ್‌ಎಫ್‌ ಐಡಿ ಮುಂತಾದ  ವಿವರಗಳನ್ನು ಇಮೇಲ್ ಅಥವಾ ವಾಟ್ಸ್‌ಆ್ಯಪ್‌ ಮೂಲಕ ಒದಗಿಸಿ ಔಷಧ ಪಡೆಯಬಹುದಾಗಿದೆ ಎಂದೂ ತಿಳಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com