ಕೋವಿಡ್ ಪರಿಸ್ಥಿತಿ ನಿಭಾಯಿಸುವಲ್ಲಿ ಕೇಂದ್ರ, ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಡಿ.ಕೆ. ಶಿವಕುಮಾರ್

ಕೋವಿಡ್ ಪರಿಸ್ಥಿತಿ ನಿಭಾಯಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಬೆಂಗಳೂರು: ಕೋವಿಡ್ ಪರಿಸ್ಥಿತಿ ನಿಭಾಯಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷವಾಗಿ ಕಾಂಗ್ರೆಸ್ ಎಲ್ಲಾ ಸಹಕಾರ ನೀಡಿದ ಬಳಿಕವೂ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಅವರು ಹೇಳಿದ್ದಾರೆ.

ಏಪ್ರಿಲ್ 18 ರಂದು ಸಂಜೆ 4 ಗಂಟೆಗೆ ನಡೆಯುವ ಸರ್ವ ಸಭೆಯಲ್ಲಿ ಪಾಲ್ಗೊಳ್ಳುವಂತೆ ತಮ್ಮಗೆ ಅಧಿಕೃತ ಆಹ್ವಾನ ಬಂದಿದೆ. ಸಭೆಯಲ್ಲಿ ಪಾಲ್ಗೊಳ್ಳುವ ಕುರಿತು ಪಕ್ಷದ ಮುಖಂಡರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು. 

ರಾಜ್ಯ ಬಿಜೆಪಿ ಸರ್ಕಾರ ಉಪ ಚುನಾವಣೆ, ಮದುವೆ ಸಭೆ, ಸಮಾರಂಭ ನಡೆಯಲು ಬಿಟ್ಟು ಈಗ ಸರ್ವ ಪಕ್ಷ ಸಭೆ ಕರೆದರೆ ಏನು ಪ್ರಯೋಜನ ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com