ಸಿಎಂ ಯಡಿಯೂರಪ್ಪಗೆ ಮತ್ತೆ ಕೊರೋನಾ ಪಾಸಿಟಿವ್: ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್
ಸಿಎಂ ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಕಳೆದೆರಡು ದಿನಗಳಿಂದ ಜ್ವರ, ಸುಸ್ತಿನಿಂದ ಬಳಲುತ್ತಿದ್ದ ಅವರನ್ನು ಶುಕ್ರವಾರ ಆಸ್ಪತ್ರೆಗೆ ದಾಖಲಿಸಿ ಕೊರೋನಾ ಪರೀಕ್ಷೆಗೆ ಒಳಪಡಿಸಿದಾಗ ಕೊರೋನಾ ಪಾಸಿಟಿವ್ ಬಂದಿದೆ.
Published: 16th April 2021 02:21 PM | Last Updated: 16th April 2021 02:30 PM | A+A A-

ಸಿಎಂ ಯಡಿಯೂರಪ್ಪ
ಬೆಂಗಳೂರು: ಸಿಎಂ ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಕಳೆದೆರಡು ದಿನಗಳಿಂದ ಜ್ವರ, ಸುಸ್ತಿನಿಂದ ಬಳಲುತ್ತಿದ್ದ ಅವರನ್ನು ಶುಕ್ರವಾರ ಆಸ್ಪತ್ರೆಗೆ ದಾಖಲಿಸಿ ಕೊರೋನಾ ಪರೀಕ್ಷೆಗೆ ಒಳಪಡಿಸಿದಾಗ ಕೊರೋನಾ ಪಾಸಿಟಿವ್ ಬಂದಿದೆ.
ಇಂದು ಮಧ್ಯಾಹ್ನ ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ತಪಾಸಣೆಗೆ ಹಾಜರಾಗಿದ್ದರು. ಅಲ್ಲಿ ನಿಗದಿಯಂತೆ ಅವರಿಗೆ ಕೊರೋನಾ ಪರೀಕ್ಷೆಗೆ ಒಳಪಡಿಸಲಾಯಿತು. ಆಗ ಪಾಸಿಟಿವ್ ಬಂದಿದ್ದು ಇದೀಗ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ.
ಸಿಎಂ ಯಡಿಯೂರಪ್ಪ ಅವರಿಗೆ ಕೊರೋನಾ ಬರುತ್ತಿರುವುದು ಇದು ಎರಡನೇ ಸಲ. ಕಳೆದ ವರ್ಷ ಕೂಡ ಕೊರೋನಾ ಬಂದು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.
#Karnataka CM @BSYBJP tested #Covid positive, to be admitted to Manipal Hospital in Bengaluru. He was tested positive in 2020 and was admitted in the same hospital. @NewIndianXpress @XpressBengaluru @santwana99 @AshwiniMS_TNIE @DHFWKA @PMOIndia @BJP4Karnataka @mla_sudhakar
— Ramu Patil (@ramupatil_TNIE) April 16, 2021