ರಾಜ್ಯದಲ್ಲಿ ಹೆಚ್ಚುತ್ತಲೇ ಇದೆ ಕೋವಿಡ್-19: ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ತುರ್ತು ಸಭೆ ಮುಕ್ತಾಯ 

ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೋವಿಡ್-19 ಸಕ್ರಿಯ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶುಕ್ರವಾರ ತಮ್ಮ ನಿವಾಸದಲ್ಲಿ ತುರ್ತು ಸಭೆ ಕರೆದಿದ್ದಾರೆ.
ಸಿಎಂ ನೇತೃತ್ವದಲ್ಲಿ ಸಭೆ
ಸಿಎಂ ನೇತೃತ್ವದಲ್ಲಿ ಸಭೆ

ಬೆಂಗಳೂರು: ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೋವಿಡ್-19 ಸಕ್ರಿಯ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶುಕ್ರವಾರ ತಮ್ಮ ನಿವಾಸದಲ್ಲಿ ತುರ್ತು ಸಭೆ ಮುಕ್ತಾಯವಾಗಿದೆ.

ಆರೋಗ್ಯ ಸಚಿವ ಡಾ ಕೆ ಸುಧಾಕರ್ ಸೇರಿದಂತೆ ವೈದ್ಯರು, ತಜ್ಞರು, ಹಿರಿಯ ಅಧಿಕಾರಿಗಳು ಸಿಎಂ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಭಾಗವಹಿಸಿದ್ದಾರೆ. ಇಂದಿನ ಸಭೆ ಮುಗಿದ ಕೂಡಲೇ ಬೆಂಗಳೂರು ನಗರದಲ್ಲಿ ಕೊರೋನಾ ನಿಯಂತ್ರಣಕ್ಕೆ ಖಡಕ್ ನಿರ್ಧಾರವನ್ನು ಇಂದು ಸರ್ಕಾರ ಪ್ರಕಟಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ತಜ್ಞರ ಸಮಿತಿ ಈಗಾಗಲೇ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಅದರ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆಗಳು ನಡೆದಿದೆ ಎಂದು ತಿಳಿದುಬಂದಿದೆ. 

ಸಭೆಯ ಬಳಿಕ ರಾಜಧಾನಿಯಲ್ಲಿನ ಕಠಿಣ ನಿಯಮ, ಶಾಲಾ-ಕಾಲೇಜುಗಳನ್ನು ನಡೆಸುವ ಬಗ್ಗೆ ಮತ್ತು ರಾಜ್ಯದಲ್ಲಿ ಇನ್ನು ಮುಂದೆ ಯಾವ್ಯಾವ ನಿಯಮ, ನಿರ್ಬಂಧ ತರಲಿದೆ ಎಂದು ಇನ್ನು ಸ್ವಲ್ಪ ಹೊತ್ತಿನಲ್ಲಿ ಸ್ಪಷ್ಟ ಚಿತ್ರಣ ಹೊರಬೀಳಲಿದೆ. 

ಇಂದು ಬೆಳಗ್ಗೆ 9.30ಕ್ಕೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಯಲಿದ್ದು ಕೋವಿಡ್-19 ಸ್ಥಿತಿಗತಿ, ಮುಂದೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ. ಸಭೆಯಲ್ಲಿ ಹಿರಿಯ ಅಧಿಕಾರಿಗಳು, ತಜ್ಞರು, ವೈದ್ಯರು, ವಿರೋಧ ಪಕ್ಷದ ನಾಯಕರು ಭಾಗವಹಿಸುವ ಸಾಧ್ಯತೆಯಿದೆ.

ರಾಜ್ಯದಲ್ಲಿ ಹೊಸದಾಗಿ 14 ಸಾವಿರದ 738 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ.  3 ಸಾವಿರದ 591 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ವಾಪಸ್ಸಾಗಿದ್ದು, ಒಟ್ಟು ಈವರೆಗೆ 9 ಲಕ್ಷ 99 ಸಾವಿರದ 958 ಜನರು ಗುಣಮುಖರಾಗಿದ್ದಾರೆ. ಸದ್ಯ 92 ಸಾವಿರದ 561 ಜನರು ಸೋಂಕಿನಿಂದ ಬಳಲುತ್ತಿದ್ದಾರೆ.

555 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ. ಬೆಂಗಳೂರಿನಲ್ಲೇ ನಿನ್ನೆ ಒಂದೇ ದಿನ 30 ಜನರು ಸೋಂಕಿನಿಂದ ಮೃತಪಟ್ಟಿದ್ದು ರಾಜ್ಯದಲ್ಲಿ ಒಟ್ಟು 66 ಜನರು ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ 10 ಸಾವಿರದ 497 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು ಒಟ್ಟು ಈವರೆಗೆ 5 ಲಕ್ಷದ 12 ಸಾವಿರದ 521 ಪ್ರಕರಣಗಳು ದೃಢಪಟ್ಟಿವೆ. 1 ಸಾವಿರದ 807 ಜನರು ಆಸ್ಪತ್ರೆಯಿಂದ ವಾಪಸ್ಸಾಗಿದ್ದು ಈವರೆಗೆ 4 ಲಕ್ಷ 35 ಸಾವಿರದ 730 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 71 ಸಾವಿರದ 827 ಜನರು ಸೋಂಕಿನಿಂದ ಬಳಲುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com