ಕೊರೋನಾ ಹೆಚ್ಚಳ: ಹಾಸಿಗೆ, ಔಷಧಿಗಳ ಲಭ್ಯತೆ ಕುರಿತು ಮಾಹಿತಿ ನೀಡುವಂತೆ ರಾಜ್ಯಕ್ಕೆ 'ಹೈ' ಸೂಚನೆ

ರಾಜ್ಯದಲ್ಲಿ ಕೊರೋನಾ 2ನೇ ಅಲೆ ವೇಗವಾಗಿ ಹರಡುತ್ತಿದ್ದು, ಈ ಬೆಳವಣಿಗೆಗೆ ಹೈಕೋರ್ಟ್ ಶುಕ್ರವಾರ ಆತಂಕ ವ್ಯಕ್ತಪಡಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ 2ನೇ ಅಲೆ ವೇಗವಾಗಿ ಹರಡುತ್ತಿದ್ದು, ಈ ಬೆಳವಣಿಗೆಗೆ ಹೈಕೋರ್ಟ್ ಶುಕ್ರವಾರ ಆತಂಕ ವ್ಯಕ್ತಪಡಿಸಿದೆ. 

ಕೊರೋನಾ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿ ಸಲ್ಲಿಕೆಯಾಗಿದ್ದ ವಿವಿಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿದ್ದವು. 

ವಿಚಾರಣೆ ವೇಳೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿಗಳು, ಕೋವಿಡ್ ಚಿಕಿತ್ಸೆಗಾಗಿ ರಾಜ್ಯದಲ್ಲಿ ಲಭ್ಯವಿರುವ ಹಾಸಿಗೆ, ಔಷಧಿ, ಆ್ಯಂಬುಲೆನ್ಸ್ ಮತ್ತು ಆಕ್ಸಿಜೆನ್ ವ್ಯವಸ್ಥೆ ಬಗ್ಗೆ ಶನಿವಾರವೇ ಮಾಹಿತಿ ನೀಡುವಂತೆ ಸರ್ಕಾರಕ್ಕೆ ನಿರ್ದೇಶಿಸಿದರು. 

ಗುರುವಾರ ಒಂದೇ ದಿನ ರಾಜ್ಯದಲ್ಲಿ 14,738 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಅದರಲ್ಲಿ ಬೆಂಗಳೂರು ನಗರದಲ್ಲಿ ಒಂದರಲ್ಲಿಯೇ 10,497 ಪ್ರಕರಣಗಳು, ಮೊದಲನೆಯ ಅಲೆಗೆ ಹೋಲಿಸಿದರೆ ಎರಡನೇ ಅಲೆಯಲ್ಲಿ ಕೊರೋನಾ ಕ್ಷಿಪ್ರಗತಿಯಲ್ಲಿ ಹರಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com