ಸಾರಿಗೆ ಮುಷ್ಕರ ಹಿಂಸಾ ರೂಪ ಪಡೆಯಬಾರದು: ಹೆಚ್.ಡಿ. ಕುಮಾರಸ್ವಾಮಿ

ಸಾರಿಗೆ ನೌಕರರು ಆರನೇ ವೇತನ ಆಯೋಗ ಶಿಫಾರಸ್ಸು ಜಾರಿಗಾಗಿ ನಡೆಸುತ್ತಿರುವ ಮುಷ್ಕರ ಹಿಂಸೆ ರೂಪ ಪಡೆಯಬಾರದು. ಮುಷ್ಕರದ ಹೆಸರಿನಲ್ಲಿ ಯಾರ ಹಠವೂ ಗೆಲ್ಲದಿರಲಿ. ಮುಷ್ಕರ ನಾಗರಿಕರಿಗೆ ಹಿತವಾಗಿರಲಿ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

Published: 17th April 2021 12:31 PM  |   Last Updated: 17th April 2021 01:25 PM   |  A+A-


ಎಚ್‌ಡಿ ಕುಮಾರಸ್ವಾಮಿ

Posted By : Raghavendra Adiga
Source : UNI

ಬೆಂಗಳೂರು: ಸಾರಿಗೆ ನೌಕರರು ಆರನೇ ವೇತನ ಆಯೋಗ ಶಿಫಾರಸ್ಸು ಜಾರಿಗಾಗಿ ನಡೆಸುತ್ತಿರುವ ಮುಷ್ಕರ ಹಿಂಸೆ ರೂಪ ಪಡೆಯಬಾರದು. ಮುಷ್ಕರದ ಹೆಸರಿನಲ್ಲಿ ಯಾರ ಹಠವೂ ಗೆಲ್ಲದಿರಲಿ. ಮುಷ್ಕರ ನಾಗರಿಕರಿಗೆ ಹಿತವಾಗಿರಲಿ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ, ಮುಷ್ಕರ ಲೆಕ್ಕಿಸದೇ, ಜನರ ಸೇವೆಗಾಗಿ ಕರ್ತವ್ಯಕ್ಕೆ ಹಾಜರಾಗಿದ್ದ ವಾಯವ್ಯ ಸಾರಿಗೆ ಸಂಸ್ಥೆ ಬಸ್ ಚಾಲಕ ನಬಿ ರಸೂಲ್ ಆವಟಿ ಅವರನ್ನು ಜಮಖಂಡಿಯಲ್ಲಿ ಕಲ್ಲಿನಿಂದ ಹೊಡೆದು ಕೊಂದ ಘಟನೆ ನನ್ನನು ದಿಗ್ಭ್ರಾಂತನನ್ನಾಗಿಸಿದೆ. ಪ್ರತಿಭಟನೆ ಎತ್ತ ಸಾಗುತ್ತಿದೆ? ಸರ್ಕಾರ ಏನು ಮಾಡುತ್ತಿದೆ ? ಎಂಬ ಪ್ರಶ್ನೆಗಳು ತಮ್ಮನ್ನು ತೀವ್ರವಾಗಿ ಕಾಡಿರುವುದಾಗಿ ಹೇಳಿದ್ದಾರೆ.

"ಜಮಖಂಡಿಯ ಈ ದುರ್ಘಟನೆ ಯಾವ ಸಂದೇಶ ನೀಡುತ್ತಿದೆ ಎಂಬುದರತ್ತ ಸರ್ಕಾರ ಗಂಭೀರವಾಗಿ ಯೋಚಿಸಲಿ. ಅನಿವಾರ್ಯ ಸಂದರ್ಭದಲ್ಲಿ ಜನರಿಗೆ ಸೇವೆ ನೀಡಲು ಇನ್ನು ಮುಂದೆ ಯಾವ ನೌಕರ ಮುಂದೆ ಬರುತ್ತಾನೆ ಎಂಬುದರ ಚಿಂತನೆ ಮಾಡಲಿ. ಮುಷ್ಕರವನ್ನು ಹಿಂಸಾತ್ಮಕ ಹಂತಕ್ಕೆ ಬೆಳೆಯಲು ಬಿಟ್ಟ ಸರ್ಕಾರದ ನಡೆಯಲ್ಲಿ ಬೇಜವಾಬ್ದಾರಿತನ ಸ್ಪಷ್ಟವಾಗಿ ಕಾಣಿಸುತ್ತಿದೆ.

"ಜಮಖಂಡಿ ದುರ್ಘಟನೆಯಲ್ಲಿ ಮೃತಪಟ್ಟ ಚಾಲಕ ನಬಿ ರಸೂಲ್ ಸರ್ಕಾರದ ಕರೆಗೆ ಓಗೊಟ್ಟು ಕರ್ತವ್ಯಕ್ಕೆ ಬಂದಿದ್ದವರು. ಹೀಗಾಗಿ ಅವರ ಕುಟುಂಬಕ್ಕೆ ಸರ್ಕಾರ ಗರಿಷ್ಠ ಪರಿಹಾರ ಒದಗಿಸಬೇಕು. ಕೃತ್ಯವೆಸಗಿದವರಿಗೆ ಶಿಕ್ಷೆ ಕೊಡಿಸಬೇಕು. ನೌಕರರ ಬೇಡಿಕೆ ಒಂದು ಕಡೆ ಇರಲಿ. ಅದಕ್ಕೂ ಮೊದಲು ನೌಕರರಲ್ಲು ಈಗ ಸರ್ಕಾರದ ಬಗ್ಗೆ ವಿಶ್ವಾಸ ಮೂಡಿಸುವ ಅಗತ್ಯವಿದೆ.

"ಬಸ್ಗಳ ಮೇಲೆ ದಾಳಿ ನಡೆಯುತ್ತಿರುವ ಪ್ರಸಂಗಗಳನ್ನು ಗಮನಿಸಿದ್ದೇನೆ. ಅಂಥವರನ್ನು ಕೂಡಲೇ ಬಂಧಿಸಬೇಕು. ನೌಕರರು ಈ ಕೃತ್ಯ ಮಾಡಿರಲಾರರು. ನೌಕರರ ಹೋರಾಟ ಸರ್ಕಾರದ ವಿರುದ್ಧವೇ ಹೊರತು, ಅನ್ನ ನೀಡುವ ಬಸ್ ಗಳ ವಿರುದ್ಧ ಅಲ್ಲ ಎಂಬ ನಂಬಿಕೆ ನನಗಿದೆ. " ಕುಮಾರಸ್ವಾಮಿ ಹೇಳಿದ್ದಾರೆ.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp