ಕರ್ನಾಟಕ ಉಪಚುನಾವಣೆ: ಬೆಳಗಾವಿ ಶೇ.54, ಮಸ್ಕಿ ಶೇ.70, ಬಸವಕಲ್ಯಾಣ ಶೇ.59ರಷ್ಟು ಮತದಾನ, ಮೇ 2ಕ್ಕೆ ಫಲಿತಾಂಶ!

ರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ, ರಾಯಚೂರಿನ ಮಸ್ಕಿ ಮತ್ತು ಬೀದರ್ ನ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆಗೆ ಮತದಾನ ನಡೆದಿದ್ದು ಮೇ 2ರಂದು ಮತ ಎಣಿಕೆ ನಡೆಯಲಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬಸವಕಲ್ಯಾಣ/ಬೆಳಗಾವಿ/ಮಸ್ಕಿ: ರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ, ರಾಯಚೂರಿನ ಮಸ್ಕಿ ಮತ್ತು ಬೀದರ್ ನ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆಗೆ ಮತದಾನ ನಡೆದಿದ್ದು ಮೇ 2ರಂದು ಮತ ಎಣಿಕೆ ನಡೆಯಲಿದೆ.

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 54ರಷ್ಟು ಮತದಾನವಾಗಿದೆ. ಬಸವಕಲ್ಯಾಣ ಕ್ಷೇತ್ರದಲ್ಲಿ ಶೇಕಡಾ 59ರಷ್ಟು ಹಾಗೂ ಮಸ್ಕಿಯಲ್ಲಿ 70ರಷ್ಟು ಮತದಾನವಾಗಿದೆ. 

ಬಸವಕಲ್ಯಾಣದಲ್ಲಿ ಬಿಜೆಪಿಯ ಶರಣು ಸಲಗರ, ಜೆಡಿಎಸ್ ನ ಸಯ್ಯದ್ ಯಸ್ರಬ್ ಅಲಿ ಖಾದ್ರಿ ಮತ್ತು ಕಾಂಗ್ರೆಸ್ ನಿಂದ ಮಾಲಾ ನಾರಾಯಣರಾವ್ ಸ್ಪರ್ಧಿಸಿದ್ದಾರೆ. ಒಟ್ಟು 12 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಮಸ್ಕಿಯಲ್ಲಿ ಬಿಜೆಪಿಯಿಂದ ಪ್ರತಾಪ್ ಗೌಡ ಪಾಟೀಲ್, ಕಾಂಗ್ರೆಸ್ ನಿಂದ ಬಸನಗೌಡ ತುರುವಿಹಾಳ ನಡುವೆ ನೇರ ಹಣಾಹಣಿ ನಡೆಯುತ್ತಿದ್ದು 8 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com