ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹಾಸನ ರೇವ್ ಪಾರ್ಟಿ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳಿಗೆ ಕೊರೋನಾ ಸೋಂಕು, ಭಾಗಿಯಾಗಿದ್ದ 130 ಮಂದಿಗೂ ಸೋಂಕು?

ಹಾಸನ ಜಿಲ್ಲೆಯಲ್ಲಿ ನಡೆದಿದ್ದ ರೇವ್ ಪಾರ್ಟಿ ಮೇಲೆ ದಾಳಿ ಮಾಡಿದ್ದ ವರಿಷ್ಠಾಧಿಕಾರಿಗಳಿಗೆ ಕೊರೋನಾ ಸೋಂಕು ತಗಲಿದ್ದು, ಪಾರ್ಟಿಯಲ್ಲಿ ಭಾಗಿಯಾಗಿದ್ದ ಎಲ್ಲ 130 ಮಂದಿಗೂ ಸೋಂಕು ತಗುಲಿದೆಯೇ ಎಂಬ ಅನುಮಾನ ಕಾಡುತ್ತಿದೆ.

ಹಾಸನ: ಹಾಸನ ಜಿಲ್ಲೆಯಲ್ಲಿ ನಡೆದಿದ್ದ ರೇವ್ ಪಾರ್ಟಿ ಮೇಲೆ ದಾಳಿ ಮಾಡಿದ್ದ ವರಿಷ್ಠಾಧಿಕಾರಿಗಳಿಗೆ ಕೊರೋನಾ ಸೋಂಕು ತಗಲಿದ್ದು, ಪಾರ್ಟಿಯಲ್ಲಿ ಭಾಗಿಯಾಗಿದ್ದ ಎಲ್ಲ 130 ಮಂದಿಗೂ ಸೋಂಕು ತಗುಲಿದೆಯೇ ಎಂಬ ಅನುಮಾನ ಕಾಡುತ್ತಿದೆ.

ಹೌದು... ಹಾಸನ ಜಿಲ್ಲೆಯ ಆಲೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಎ. 10ರಂದು ರಾತ್ರಿ ನಡೆದಿದ್ದ ರೇವ್‌ ಪಾರ್ಟಿ ಮೇಲೆ ದಾಳಿ ಮಾಡಿದ್ದ ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಮರನಾಥ್‌ ಮತ್ತು ಹಾಸನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್‌.ಶ್ರೀನಿವಾಸಗೌಡ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ. 

ಹೀಗಾಗಿ ಈಗಾಗಲೇ ಡಾ.ಅಮರನಾಥ್‌ ಅವರ ಚೇಂಬರ್‌ ಸೀಲ್‌ಡೌನ್‌ ಮಾಡಲಾಗಿದ್ದು, ಹಾಸನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್‌.ಶ್ರೀನಿವಾಸಗೌಡ ಅವರಿಗೂ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಅವರು ಐಸೋಲೇಷನ್ ನಲ್ಲಿದ್ದಾರೆ.

ಅಧಿಕಾರಿಗಳಾದ ಶ್ರೀನಿವಾಸ್ ಗೌಡ ಮತ್ತು ಡಾ.ಅಮರನಾಥ್‌ ರೇವ್‌ ಮೇಲೆ ದಾಳಿ ನಡೆಸಿ 130 ಜನರನ್ನು ವಶಕ್ಕೆ ಪಡೆದಿದ್ದರು. ಈ ಸಂದರ್ಭದಲ್ಲಿ ಅವರಿಗೆ ಸೋಂಕು ತಗುಲಿರುವ ಸಾಧ್ಯತೆ ಇದೆ. ಅಂತೆಯೇ ಪಾರ್ಟಿಯಲ್ಲಿ ಭಾಗಿಯಾಗಿದ್ದ 130 ಮಂದಿಗೂ ಸೋಂಕು ಹಬ್ಬಿರುವ ಸಾಧ್ಯತೆ ಇದ್ದು ವರಿಷ್ಠಾಧಿಕಾರಿಗಳ ಸೂಚನೆಯಂತೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com