45 ವರ್ಷ ಮೇಲ್ಪಟ್ಟ ಪೊಲೀಸ್ ಸಿಬ್ಬಂದಿ, ಕುಟುಂಬಸ್ಥರಿಗೆ ಲಸಿಕೆ ಕಡ್ಡಾಯ- ಪ್ರವೀಣ್ ಸೂದ್

 ಕೋವಿಡ್​ ಎರಡನೇ ಅಲೆ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇದನ್ನು ತಡೆಗಟ್ಟಲು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.
ಪ್ರವೀಣ್ ಸೂದ್
ಪ್ರವೀಣ್ ಸೂದ್

ಬೆಂಗಳೂರು: ಕೋವಿಡ್​ ಎರಡನೇ ಅಲೆ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇದನ್ನು ತಡೆಗಟ್ಟಲು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.

ಇಲಾಖೆಯ ಅಧಿಕಾರಿ, ಸಿಬ್ಬಂದಿ ಮತ್ತು ಕುಟುಂಬ ವರ್ಗದ ಹಿತದೃಷ್ಟಿಯಿಂದ ರೋಗದ ಗಾಂಭೀರ್ಯತೆ ಅರಿತು ಘಟಕಾಧಿಕಾರಿಗಳು, ಅಧಿಕಾರಿ ಮತ್ತು ಸಿಬ್ಬಂದಿಯ ಮನೋಸ್ಥೈರ್ಯ ಹೆಚ್ಚಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ.

ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯಲ್ಲಿ ಕೋವಿಡ್ ಸಾಂಕ್ರಾಮಿಕ ಸಂಬಂಧಿತ ಸೂಕ್ತ ನಡವಳಿಕೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಕ್ರಮ ಕೈಗೊಳ್ಳಬೇಕು, 45 ವರ್ಷ ಮೇಲ್ಪಟ್ಟ ಪೊಲೀಸ್ ಸಿಬ್ಬಂದಿ, ಕುಟುಂಬಸ್ಥರು ಕಡ್ಡಾಯವಾಗಿ ಲಸಿಕೆ ಪಡೆಯಬೇಕು ಎಂದು ಅವರು ಸೂಚನೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com