ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ: ಮಹಾಮಾರಿಗೆ ಒಂದೇ ದಿನ 146 ಬಲಿ, 15,785 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಸೋಮವಾರ ಒಂದೇ ದಿನ ಬರೋಬ್ಬರಿ 146 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 13497ಕ್ಕೆ ಏರಿಕೆಯಾಗಿದೆ.
Published: 19th April 2021 07:47 PM | Last Updated: 19th April 2021 07:47 PM | A+A A-
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಸೋಮವಾರ ಒಂದೇ ದಿನ ಬರೋಬ್ಬರಿ 146 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 13497ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 15,785 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 11,76,850ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 9618 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 5,56,253ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 97 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇಂದು 7098 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 10,21,250ಕ್ಕೆ ಏರಿಕೆಯಾಗಿದೆ. ಇನ್ನು 1,42,084 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 721 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Look at today’s number of #COVID19 deaths-146 across #Karnataka. Of this, 97 r from blr @NammaBengaluroo. Slight reduction in number of cases 15785 new cases and blr has 9618 cases. ICU admissions 721. @XpressBengaluru @santwana99 @epigiri @AnantBhan @DHFWKA @ameenemudassar pic.twitter.com/m0VvNDdoj4
— Chetana Belagere (@chetanabelagere) April 19, 2021









