ಬೆಂಗಳೂರು ಸೇರಿ ರಾಜ್ಯಾದ್ಯಂತ 23ರವರೆಗೆ ಸಾಧಾರಣ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಸೋಮವಾರದಿಂದ ಮುಂದಿನ 23ನೇ ತಾರೀಖು ಶುಕ್ರವಾರದವರೆಗೆ ಹಗುರದಿಂದ ಕೂಡಿದ ಸಾಧಾರಣ ಪ್ರಮಾಣದ ಮಳೆ ರಾದ್ಯಾದ್ಯಂತ ಸುರಿಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಸೋಮವಾರದಿಂದ ಮುಂದಿನ 23ನೇ ತಾರೀಖು ಶುಕ್ರವಾರದವರೆಗೆ ಹಗುರದಿಂದ ಕೂಡಿದ ಸಾಧಾರಣ ಪ್ರಮಾಣದ ಮಳೆ ರಾದ್ಯಾದ್ಯಂತ ಸುರಿಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಕೂಡ ಮಳೆ ಸುರಿಯುವ ಲಕ್ಷಣಗಳಿವೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.

ಇಂದು ಕರಾವಳಿ ಭಾಗದಲ್ಲಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಸುರಿಯಲಿದೆ.

ನಿನ್ನೆ ಶಿರಾಡಿಯಲ್ಲಿ 4 ಸೆಂ,ಮೀ, ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ 3 ಸೆಂ,ಮೀ, ಶಿವಮೊಗ್ಗ ಜಿಲ್ಲೆಯ ತ್ಯಾಗರ್ತಿಯಲ್ಲಿ 4 ಸೆಂ,ಮೀ ಮಳೆಯಾಗಿದೆ.

ರಾಜ್ಯದಲ್ಲಿ ಕಲಬುರಗಿಯಲ್ಲಿ ಅತಿ ಹೆಚ್ಚು ತಾಪಮಾನ 39.7 ಡಿಗ್ರಿ ಸೆಲ್ಸಿಯಸ್, ವಿಜಯಪುರದಲ್ಲಿ 38.4, ರಾಯಚೂರಿನಲ್ಲಿ 39 ಡಿಗ್ರಿ ಸೆಲ್ಸಿಯಸ್, ಕೊಪ್ಪಳದಲ್ಲಿ 37.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com