ಮಾಜಿ ನ್ಯಾಯಾಧೀಶರ ನೇತೃತ್ವದ ಸಮಿತಿ ಸುಪರ್ದಿಗೆ ಗೋಕರ್ಣ ದೇವಾಲಯ: ಸುಪ್ರೀಂ ಕೋರ್ಟ್ ತೀರ್ಪು

ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ನಿರ್ವಹಣೆಯನ್ನು ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಬಿ.ಎನ್. ಶ್ರೀಕೃಷ್ಣ ನೇತೃತ್ವದ ಮೇಲ್ವಿಚಾರಣಾ ಸಮಿತಿಗೆ ಹಸ್ತಾಂತರಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಗೋಕರ್ಣ ಮಹಾಬಲೇಶ್ವರ ದೇವಸ್ಥಾನ
ಗೋಕರ್ಣ ಮಹಾಬಲೇಶ್ವರ ದೇವಸ್ಥಾನ

ನವದೆಹಲಿ: ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ನಿರ್ವಹಣೆಯನ್ನು ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಬಿ.ಎನ್. ಶ್ರೀಕೃಷ್ಣ ನೇತೃತ್ವದ ಮೇಲ್ವಿಚಾರಣಾ ಸಮಿತಿಗೆ ಹಸ್ತಾಂತರಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎಸ್ ಎಸ್ ಬೋಪಣ್ಣ ಮತ್ತು ವಿ. ರಾಮಸುಬ್ರಮಣಿಯನ್ ಅವರನ್ನೊಳಗೊಂಡ ನ್ಯಾಯಪೀಠವು ರಾಮಚಂದ್ರಾಪುರ ಮಠ ಸೇರಿದಂತೆ ಗುಂಪೊಂದು ಸಲ್ಲಿಸಿದ್ದ ಮನವಿಯ ಕುರಿತು ಸೋಮವಾರ ತೀರ್ಪು ನೀಡಿತು.

ಗೋಕರ್ಣದಲ್ಲಿರುವ ಮಹಾಬಲೇಶ್ವರ ದೇವಾಲಯದ ನಿರ್ವಹಣೆಯನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸುವ ರಾಜ್ಯ ಸರ್ಕಾರದ ಆದೇಶವನ್ನು ರದ್ದುಪಡಿಸಿದ 2018 ರ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ 'ಮಠ' ಮೇಲ್ಮನವಿ ಸಲ್ಲಿಸಿತ್ತು.

ಉನ್ನತ ನ್ಯಾಯಾಲಯವು ತನ್ನ ಹಿಂದಿನ ಮಧ್ಯಂತರ ಆದೇಶಗಳನ್ನು ಮಾರ್ಪಡಿಸಿತು ಮತ್ತು ಗೋಕರ್ಣ ಮಹಾಬಲೇಶ್ವರ ದೇವಸ್ಥಾನವು ಈಗ ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ (ನಿವೃತ್ತ) ಶ್ರೀಕೃಷ್ಣ ನೇತೃತ್ವದ ಮೇಲ್ವಿಚಾರಣಾ ಸಮಿತಿಯಡಿ ಬರುತ್ತದೆ ಎಂದು ಆದೇಶಿಸಿದೆ.

ಇದರಂತೆ ಮೇಲ್ಮನವಿ ಸಲ್ಲಿಸಿದ್ದ 'ಮಠ' ಎಲ್ಲಾ ಪದ್ಧತಿಗಳು ಮತ್ತು ಸಂಪ್ರದಾಯಗಳಿಗೆ ಅನುಸಾರವಾಗಿ ಕಾರ್ಯನಿರ್ವಹಿಸುವ ಸಮಿತಿಗೆ ನಿರ್ವಹಣೆಯನ್ನು ಹಸ್ತಾಂತರಿಸಬೇಕಾಗುತ್ತದೆ ಎಂದು ನ್ಯಾಯಪೀಠ ತನ್ನ ತೀರ್ಪಿನಲ್ಲಿ ತಿಳಿಸಿದೆ. "ಮೇಲ್ವಿಚಾರಣಾ ಸಮಿತಿಯು ನ್ಯಾಯಮೂರ್ತಿ ಬಿ ಎನ್ ಶ್ರೀಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಿಸಲಿದೆ ಎಂದು ನಾವು ನಿರ್ದೇಶಿಸುತ್ತೇವೆ. ಮೇಲ್ಮನವಿ ಸಹಾಯಕ ಆಯುಕ್ತರಿಗೆ ಮೇಲ್ವಿಚಾರಣಾ ಸಮಿತಿಗೆ ವರದಿ ಸಲ್ಲಿಸುವ ಜವಾಬ್ದಾರಿಯನ್ನು ಹಸ್ತಾಂತರಿಸುತ್ತಾರೆ" ಎಂದು ವಿಡಿಯೋ  ಕಾನ್ಫರೆನ್ಸಿಂಗ್ ಮೂಲಕ ತೀರ್ಪು ಪ್ರಕಟಿಸುವಾಗ ಸಿಜೆಐ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com