ಕೊರೋನಾ ಸೋಂಕು ನಿಯಂತ್ರಿಸಲು ರಾಜ್ಯ ಮತ್ತು ಕೇಂದ್ರಗಳ ನಡುವೆ ಸಮನ್ವಯ ಅಗತ್ಯ: ಬೊಮ್ಮಾಯಿ

ಕೊರೋನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವೆ ಸಮನ್ವಯ ಅಗತ್ಯ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವೆ ಸಮನ್ವಯ ಅಗತ್ಯ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಲೋಕಸಭಾ ಸಚಿವಾಲಯದಿಂದ ನಡೆದೆ ವಿಡಿಯೋ ಸಂವಾದದಲ್ಲಿ ಕರ್ನಾಟಕ ರಾಜ್ಯದ ಪರವಾಗಿ ಪ್ರತಿನಿಧಿಸಿ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೋವಿಡ್ 19 ಎರಡನೇ ಅಲೆ ಮೊದಲ ಅಲೆಗಿಂತ ವೇಗವಾಗಿ ಹರಡುತ್ತಿದೆ ಎಂದು ಹೇಳಿದ್ದಾರೆ.

ನಾವೆಲ್ಲರೂ ಬಹು ದೊಡ್ಡ ಸವಾಲು ಎದುರಿಸುತ್ತಿದ್ದೇವೆ, ನಾವು ಈಗ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿನ ಹಾಸಿಗೆಗಳ ವಿಷಯದಲ್ಲಿ ಕ್ರಮ ತೆಗೆದುಕೊಳ್ಳುತ್ತಿದ್ದೇವೆ, , ಚಿಕಿತ್ಸೆಯ ವಿಷಯದಲ್ಲಿ ಉತ್ತಮವಾಗಿ ಸಜ್ಜುಗೊಂಡಿದ್ದೇವೆ, ”ಎಂದು ಅವರು ಹೇಳಿದ್ದಾರೆ.

ಈಗ ಪ್ರತಿದಿನ ಒಂದುವರೆ ಲಕ್ಷ ಟೆಸ್ಟ್ ಮಾಡಲಾಗುತ್ತಿದೆ, ಮುಂದಿನ ಎರಡು ಮೂರು ದಿನಗಳಲ್ಲಿ 2 ಲಕ್ಷಕ್ಕೇರಿಸಲಾಗುತ್ತದೆ ಎಂದು ತಿಳಿಸಿದ್ದಾರೆ, ನೆರೆಯ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಸಾಂಕ್ರಾಮಿಕ ಉತ್ತುಂಗದಲ್ಲಿರುವುದರಿಂದ ರಾಜ್ಯವು ದೊಡ್ಡ ಸವಾಲನ್ನು ಎದುರಿಸುತ್ತಿದೆ ಎಂದು ಗೃಹ ಸಚಿವರು ಹೇಳಿದರು.

ನೆರೆಯ ರಾಜ್ಯಗಳಿಂದ ಪ್ರಯಾಣಿಸುವ ಜನರು ಆರ್‌ಟಿಪಿಸಿಆರ್ ವರದಿಗಳನ್ನು ಕೊಂಡೊಯ್ಯಬೇಕೆಂದು ಕರ್ನಾಟಕ ತಿಳಿಸಿದೆ, ಕೋವಿಡ್ ಹೊಂದಿರುವವರಿಗೆ ನಮ್ಮ ರಾಜ್ಯಕ್ಕೆ ಪ್ರವೇಶಿಸಲು ಅವಕಾಶವಿಲ್ಲ  ಎಂದು ಅವರು ಹೇಳಿದರು. 69 ಲಕ್ಷ ಲಸಿಕೆಗಳನ್ನು ಹೊಂದಿರುವ ದೇಶದ ಅಗ್ರ ಐದು  ರಾಜ್ಯಗಳಲ್ಲಿ ಕರ್ನಾಟಕವಿದೆ ಎಂದು ರಾಜ್ಯದ ವ್ಯಾಕ್ಸಿನೇಷನ್  ಡ್ರೈವ್‌ನಲ್ಲಿ ಕರ್ನಾಟಕ ಮುಂದಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಮುಂಜಾಗ್ರತೆ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಮತ್ತು ಲಸಿಕೆ ಪಡೆಯಲು ಜನರನ್ನು ಪ್ರೋತ್ಸಾಹಿಸುವ ಮೂಲಕ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಚುನಾಯಿತ ಪ್ರತಿನಿಧಿಗಳು ನಿರ್ಣಾಯಕ ಪಾತ್ರ ವಹಿಸುತ್ತಾರೆ ಎಂದು ಕರ್ನಾಟಕ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. 

ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲು ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಉಳಿಯಲು ಏಪ್ರಿಲ್ 24 ರಿಂದ ಸದನ ಸಮಿತಿ ಸಭೆಗಳನ್ನು ರದ್ದುಪಡಿಸಲಾಗಿದೆ ಎಂದು ಸ್ಪೀಕರ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com