ಹೈಕೋರ್ಟ್
ಹೈಕೋರ್ಟ್

ಅಂಗನವಾಡಿಗಳಲ್ಲಿ ವಿದ್ಯುತ್, ಶೌಚಾಲಯ ಸೌಲಭ್ಯ ಕಲ್ಪಿಸಲು ತಕ್ಷಣ ಕ್ರಮ ಕೈಗೊಳ್ಳಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ವಿದ್ಯುತ್ ಮತ್ತು ಶೌಚಾಲಯ ಸೌಲಭ್ಯ ಒದಗಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಬೆಂಗಳೂರು: ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ವಿದ್ಯುತ್ ಮತ್ತು ಶೌಚಾಲಯ ಸೌಲಭ್ಯ ಒದಗಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ಪೀಠವು ಅಂಗನವಾಡಿ ಕೇಂದ್ರಗಳಲ್ಲಿನ ಮೂಲಸೌಕರ್ಯಗಳ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

ಅಂಗನವಾಡಿ ಕೇಂದ್ರಗಳಿಗೆ ಮೂಲಸೌಕರ್ಯಗಳ ಕೊರತೆ ಇದೆ ಎಂಬ ಬಗ್ಗೆ ವದರಿ ಇದ್ದು ಅದರಲ್ಲಿನ ಹೇಳಿಕೆಗಳು ಆಘಾತಕಾರಿಯಾಗಿದೆ. ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರಾಜ್ಯದಲ್ಲಿ ಮಧ್ಯಮದಿಂದ ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಎಲ್ಲ ಮಕ್ಕಳನ್ನು ಗುರುತಿಸಿ ಸಹಾಯ ಮಾಡಲು ಕೋರಿ ಸರ್ಕಾರೇತರ ಸಂಸ್ಥೆಯೊಂದು ಬರೆದ ಪತ್ರದ ಆಧಾರದ ಮೇಲೆ ಸುಯೋ ಮೋಟು ಅರ್ಜಿ ವಿಚಾರಣೆ ಇಂದು ನಡೆದಿತ್ತು.

ರಾಜ್ಯ ಸರ್ಕಾರ ಸಲ್ಲಿಸಿದ ವರದಿಯಲ್ಲಿ ರಾಜ್ಯದ 65,911 ಅಂಗನವಾಡಿ ಕೇಂದ್ರಗಳಲ್ಲಿ ಕೇವಲ 33,146 ಮಾತ್ರ ವಿದ್ಯುತ್ ಸಂಪರ್ಕವನ್ನು ಹೊಂದಿವೆ ಎಂದು ತಿಳಿದುಬಂದಿದೆ. ಕೇವಲ 29,516 ಕೇಂದ್ರಗಳಿಗೆ ಮಾತ್ರ ಫ್ಯಾನ್ ಗಳನ್ನು ಒದಗಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದ್ದು, 44,025 ಅಂಗನವಾಡಿಗಳಲ್ಲಿ ಮಾತ್ರ ಶೌಚಾಲಯ ಸೌಲಭ್ಯವಿದೆ. "ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ವಿದ್ಯುತ್ ಸರಬರಾಜು ಮಾಡಲು ಮತ್ತು ಎಲ್ಲಾ ಕೇಂದ್ರಗಳಿಗೆ ಫ್ಯಾನ್ ಗಳನ್ನು ಪೂರೈಸಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾವು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುತ್ತೇವೆ. ಶಿಫಾರಸುಗಳ ಪ್ರಕಾರ 65,911 ಕೇಂದ್ರಗಳಿಗೆ ಶೌಚಾಲಯವನ್ನು ಒದಗಿಸುವಂತೆ ನಾವು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುತ್ತೇವೆ ”ಎಂದು ನ್ಯಾಯಾಲಯ ಆದೇಶಿಸಿದೆ.

ಬೆಂಗಳೂರಿನಲ್ಲಿ ಸಾಕಷ್ಟು ಅಂಗನವಾಡಿಗಳನ್ನು ಸ್ಥಾಪಿಸುವಂತೆ  ನ್ಯಾಯಾಲಯವು ರಾಜ್ಯವನ್ನು ಒತ್ತಾಯಿಸಿತು.

"ವಾಸ್ತವವಾಗಿ ಶಿಫಾರಸು ಹುಡುಗರು / ಹುಡುಗಿಯರು ಮತ್ತು ಅಂಗವಿಕಲ ಮಕ್ಕಳಿಗೆ ಪ್ರತ್ಯೇಕ ಶೌಚಾಲಯಗಳನ್ನು ನೀಡುವಂತೆ ಹೇಳುತ್ತದೆ.ದೆ. ರಾಜ್ಯವು ಶಿಫಾರಸುಗಳನ್ನು ಗಮನಿಸಬೇಕಾಗುತ್ತದೆ. ಬೆಂಗಳೂರು ನಗರದಲ್ಲಿ ಸಾಕಷ್ಟು ಸಂಖ್ಯೆಯ ಅಂಗನವಾಡಿ ಕೇಂದ್ರಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಬೇಕು.”ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರಾಜ್ಯ ಸರ್ಕಾರವು ನಿರ್ದೇಶನಗಳನ್ನು ಹಂತ ಹಂತವಾಗಿ ಪಾಲಿಸಬೇಕು ಎಂದು ನ್ಯಾಯಾಲಯವು ನಿರ್ದೇಶಿಸಿದೆ. ಅ;ಲ್ಲದೆ ತಾನು ತೆಗೆದುಕೊಂಡ ಕ್ರಮಗಳ ಸಂಬಂಧ ವರದಿ ಮಾಡಲು ಟೈಮ್ ಲೈನ್ ರೂಪಿಸುವ ಅಫಿಡವಿಟ್ ಅನ್ನು ಜೂನ್ 11 ರೊಳಗೆ ಸಲ್ಲಿಸಬೇಕು ಎಂದು ಕೋರ್ಟ್ ಹೇಳಿದೆ.

Related Stories

No stories found.

Advertisement

X
Kannada Prabha
www.kannadaprabha.com