
ಶ್ರೀನಿವಾಸ ಪ್ರಸಾದ್
ಮೈಸೂರು: ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರ ಆಪ್ತ ಕಾರ್ಯದರ್ಶಿ ಶಂಕರ್ (78) ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಚಾಮರಾಜನಗರ ಬಿಜೆಪಿ ಸಂಸದರಾದ ಶ್ರೀನಿವಾಸ ಪ್ತಸಾದ್ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಶಂಕರ್ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಶಂಕರ್ ಕಳೆದ 40 ವರ್ಷಗಳಿಂದ ಶ್ರೀನಿವಾಸ ಪ್ರಸಾದ್ ಅವರ ಬಳಿ ಕೆಲಸ ಮಾಡುತ್ತಿದ್ದರು. ಶಂಕರ್ ಅವರಿಗೆ ಒಂದು ವಾರದ ಹಿಂದೆ ಕೋವಿಡ್ ಕಾಣಿಸಿಕೊಂಡಿದೆ. ಚಿಕಿತ್ಸೆಗಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಇನ್ನು ಸೋಮವಾರ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರ ಆಪ್ತ ಸಹಾಯಕ ಎಚ್.ಜೆ. ರಮೇಶ್ ಸಹ ಕೊರೋನಾ ಸೋಂಕಿಗೆ ಬಲಿಯಾಗಿದ್ದರು.