ಕೋವಿಡ್ ನಿಯಂತ್ರಣಕ್ಕೆ ಉಸ್ತುವಾರಿ ಜಿಲ್ಲೆಗಳಲ್ಲಿ ವಾಸ್ತವ್ಯ ಹೂಡುವಂತೆ ಸಚಿವರಿಗೆ ಸಿಎಂ ಸೂಚನೆ
ವೈರಾಣು ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಸಹ ತ್ವರಿತವಾಗಿ ಕ್ರಮ ಕೈಗೊಳ್ಳುವುದು ಅಗತ್ಯವಾಗಿರುವ ಹಿನ್ನೆಲೆಯಲ್ಲಿ ಸಚಿವರು ತಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ವಾಸ್ತವ್ಯ ಹೂಡುವಂತೆ ಸಿಎಂ ಯಡಿಯೂರಪ್ಪ ಪತ್ರ ಬರೆದಿದ್ದಾರೆ.
Published: 21st April 2021 06:10 PM | Last Updated: 21st April 2021 06:51 PM | A+A A-

ಯಡಿಯೂರಪ್ಪ
ಬೆಂಗಳೂರು: ವೈರಾಣು ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಸಹ ತ್ವರಿತವಾಗಿ ಕ್ರಮ ಕೈಗೊಳ್ಳುವುದು ಅಗತ್ಯವಾಗಿರುವ ಹಿನ್ನೆಲೆಯಲ್ಲಿ ಸಚಿವರು ತಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ವಾಸ್ತವ್ಯ ಹೂಡುವಂತೆ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಸಿಎಂ ಯಡಿಯೂರಪ್ಪ ಪತ್ರ ಬರೆದಿದ್ದಾರೆ.
ಕೋವಿಡ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲ್ಲು ಉಸ್ತುವಾರಿ ಜಿಲ್ಲೆಯಲ್ಲಿ ಯೇ ವಾಸ್ತವ್ಯ ಮಾಡಿ ಪರಿಸ್ಥಿತಿ ಅವಲೋಕಿಸಿ ತ್ವರಿತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ವೈರಾಣು ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೂಡಲೇ ಕಾರ್ಯಪ್ರವೃತ್ತರಾಗಿ ಜಿಲ್ಲಾಡಳಿತದೊಂದಿಗೆ ಸತತ ಸಂಪರ್ಕದಲ್ಲಿದ್ದು , ಸಾರ್ವಜನಿಕರಲ್ಲಿ ವೈರಸ್ ಹರಡುವಿಕೆಯ ನಿಯಂತ್ರಣ ಕುರಿತು ಮುನ್ನೆಚ್ಚರಿಕೆ ಕೈಗೊಳ್ಳುವ ಕುರಿತು ಹಾಗೂ ಸೋಂಕಿತರಿಗೆ ಅಗತ್ಯ ವೈದ್ಯಕೀಯ ಸೌಲಭ್ಯ ದೊರಕಿಸುವ ನಿಟ್ಟಿನಲ್ಲಿ ತ್ವರಿತ ಕ್ರಮ ಕೈಗೊಂಡು ಪರಿಸ್ಥಿತಿ ಉಲ್ಬಣವಾಗದಂತೆ ಕ್ರಮ ವಹಿಸಬೇಕು.
ಕೋವಿಡ್ -19 ವೈರಾಣುವಿನ 2 ನೇ ಅಲೆಯು ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರವು ಸಮರೋಪಾದಿಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಸಿಎಂ ಪತ್ರದಲ್ಲಿ ತಿಳಿಸಿದ್ದಾರೆ.