ಕೋವಿಡ್-19: ಬೆಂಗಳೂರು ಆಸ್ಪತ್ರೆಗಳಲ್ಲಿ ಹಾಸಿಗೆಗಳ ಅಭಾವ, ಮೈಸೂರಿನತ್ತ ಮುಖ ಮಾಡುತ್ತಿರುವ ಸೋಂಕಿತರು!

ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಆರ್ಭಟ ಹೆಚ್ಚಾಗುತ್ತಲೇ ಇದ್ದು, ಸೋಂಕಿತರು ಹೆಚ್ಚಾಗಿ ಆಸ್ಪತ್ರೆಗಳಿಗೆ ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ಹಾಸಿಗೆಗಳ ಅಭಾವ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಗಂಭೀರ ಸ್ಥಿತಿಯಲ್ಲಿರುವ ಸೋಂಕಿತರು ಚಿಕಿತ್ಸೆಗಾಗಿ ಮೈಸೂರಿನತ್ತ ಮುಖ ಮಾಡುತ್ತಿದ್ದಾರೆಂದು ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮೈಸೂರು: ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಆರ್ಭಟ ಹೆಚ್ಚಾಗುತ್ತಲೇ ಇದ್ದು, ಸೋಂಕಿತರು ಹೆಚ್ಚಾಗಿ ಆಸ್ಪತ್ರೆಗಳಿಗೆ ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ಹಾಸಿಗೆಗಳ ಅಭಾವ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಗಂಭೀರ ಸ್ಥಿತಿಯಲ್ಲಿರುವ ಸೋಂಕಿತರು ಚಿಕಿತ್ಸೆಗಾಗಿ ಮೈಸೂರಿನತ್ತ ಮುಖ ಮಾಡುತ್ತಿದ್ದಾರೆಂದು ತಿಳಿದುಬಂದಿದೆ. 

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಆರಂಭವಾಗುತ್ತಿದ್ದು, ಬೆಂಗಳೂರಿನಲ್ಲಿ ಹಾಸಿಗೆ ಸಮಸ್ಯೆ ಎದುರಾಗಿದೆ. ಪ್ರಮುಖವಾಗಿ ಗಂಭೀರ ಸಮಸ್ಯೆ ಎದುರಿಸುತ್ತಿರುವವರಿಗೆ ಆಕ್ಸಿಜನ್ ವುಳ್ಳ ಹಾಸಿಗೆಗಳಿಗೆ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗಳಿಗೆ ದಾಖಲಾಗುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಕೋವಿಡೇತರ ರೋಗಿಗಳೂ ಕೂಡ ಬೆಂಗಳೂರಿನ ವೈದ್ಯರ ಶಿಫಾರಸ್ಸಿನ ಮೇರೆಗೆ ಮೈಸೂರು ಆಸ್ಪತ್ರೆಗಳಿಗೆ ದಾಖಲಾಗುತ್ತಿದ್ದಾರೆಂದು ಎಂದು ಖಾಸಗಿ ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಹೇಳಿದ್ದಾರೆ. 

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮೈಸೂರು ಉಪ ಆಯುಕ್ತೆ ರೋಹಿಣಿ ಸಿಂಧೂರಿಯವರು, ಬೆಂಗಳೂರಿನಲ್ಲಿ ಹಾಸಿಗೆ ಅಭಾವ ಎದುರಾಗಿದೆ. ಹೀಗಾಗಿ ಮೈಸೂರಿಗೆ ಬರುವುದು ಸುಲಭವಾಗಿರುವುದರಿಂದ ಸಾಕಷ್ಟು ಸೋಂಕಿತರು ಇಲ್ಲಿನ ಆಸ್ಪತ್ರೆಗಳಿಗೆ ದಾಖಲಾಗುತ್ತಿದ್ದಾರೆ. ಸಂಬಂಧಿಕರ ಸಹಾಯದೊಂದಿಗೆ ಮೈಸೂರಿಗೆ ಆಗಮಿಸಿ ಆಸ್ಪತ್ರೆಗಳಿಗೆ ದಾಖಲಾಗುತ್ತಿದ್ದಾರೆ. ತಡವಾಗಿ ಆಸ್ಪತ್ರೆಗಳಿಗೆ ದಾಖಲಾಗುತ್ತಿರುವುದರಿಂದ ಕಠಿಣ ಪರಿಸ್ಥಿತಿ ಎದುರಾಗುತ್ತಿದೆ. ನಗರಕ್ಕೆ ಬರುವ ಜನರಿಗೆ ನಾವು ನಿರ್ಬಂಧ ಹೇರಲು ಸಾಧ್ಯವಿಲ್ಲ. ಆದರೆ, ನಮಗೆ ಸಾವಿನ ಸಂಖ್ಯೆ ಏರಿಕೆಯಾಗುವ ಕುರಿತು ಭೀತಿ ಶುರುವಾಗಿದೆ ಎಂದು ಹೇಳಿದ್ದಾರೆ. 

ಖಾಸಗಿ ಆಂಬ್ಯುಲೆನ್ಸ್ ಸೇವಾ ಪೂರೈಕೆದಾರರು ಮಾತನಾಡಿ, ಬೆಂಗಳೂರಿನಿಂದ ಸಾಕಷ್ಟು ದೂರವಾಣಿ ಕರೆಗಳು ಬರುತ್ತಿವೆ. ಬೆಂಗಳೂರಿನಿಂದ ಮೈಸೂರಿಗೆ ಸೋಂಕಿತ ವ್ಯಕ್ತಿಯನ್ನು ಸ್ಥಳಾಂತರಿಸಲು ಸಾಧ್ಯವೇ ಎಂದು ಕೇಳುತ್ತಿದ್ದಾರೆಂದು ತಿಳಿಸಿದ್ದಾರೆ. 

ಕಳೆದ ವಾರ ಮೈಸೂರು ಜಿಲ್ಲೆಯಲ್ಲಿ 40 ಸಾವುಗಳು ಸಂಭವಿಸಿದ್ದು, ಪರಿಸ್ಥಿತಿ ಕುರಿತು ಇದೀಗ ಜಿಲ್ಲಾ ಆರೋಗ್ಯಾಧಿಕಾರಿಗಳು ಹಾಗೂ ಜಿಲ್ಲಾ ಆಡಳಿತ ಮಂಡಳಿ ಆತಂಕ ವ್ಯಕ್ತಪಡಿಸುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com