ಕೊರೋನಾ ಸಾವಿನಲ್ಲಿ ಹೆಚ್ಚಳ: ನಗರ, ಹಳ್ಳಿಗಳಿಂದ 1 ಕಿಲೋ ಮೀಟರ್ ದೂರದಲ್ಲಿ ತಾತ್ಕಾಲಿಕ ಸ್ಮಶಾನ ನಿರ್ಮಿಸಲು ಸರ್ಕಾರ ಸೂಚನೆ

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕಾಗಿ ಬೃಹತ್ ಬೆಂಗಳೂರು ಮಹಾನಗರಪಾಲಿಕೆ ಮತ್ತು ರಾಜ್ಯದಲ್ಲಿರುವ ಇತರೆ ಮಹಾನಗರಪಾಲಿಕೆಗಳ ವ್ಯಾಪ್ತಿಯಿಂದ 12 ಕಿ.ಮೀ ದೂರದಲ್ಲಿ ಕೋವಿಡ್ ಮೃತದೇಹಗಳನ್ನು ದಹಿಸುವುದಕ್ಕಾಗಿ ತಾತ್ಕಾಲಿಕವಾಗಿ ಸರ್ಕಾರೀ ಜಮೀನುಗಳನ್ನು ಒದಗಿಸಲು ಜಿಲ್ಲಾಧಿಕಾರಿಗಳಿಗೆ ಸರ್ಕಾರ ಸೂಚಿಸಿ ಆದೇಶಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕಾಗಿ ಬೃಹತ್ ಬೆಂಗಳೂರು ಮಹಾನಗರಪಾಲಿಕೆ ಮತ್ತು ರಾಜ್ಯದಲ್ಲಿರುವ ಇತರೆ ಮಹಾನಗರಪಾಲಿಕೆಗಳ ವ್ಯಾಪ್ತಿಯಿಂದ 12 ಕಿ.ಮೀ ದೂರದಲ್ಲಿ ಕೋವಿಡ್ ಮೃತದೇಹಗಳನ್ನು ದಹಿಸುವುದಕ್ಕಾಗಿ ತಾತ್ಕಾಲಿಕವಾಗಿ ಸರ್ಕಾರೀ ಜಮೀನುಗಳನ್ನು ಒದಗಿಸಲು ಜಿಲ್ಲಾಧಿಕಾರಿಗಳಿಗೆ ಸರ್ಕಾರ ಸೂಚಿಸಿ ಆದೇಶಿಸಿದೆ.

ಕೂಡಲೇ ಎಲ್ಲಾ ಜಿಲ್ಲಾಧಿಕಾರಿಗಳು ತ್ವರಿತಗತಿಯಲ್ಲಿ ಆದೇಶದಂತೆ ಅತ್ಯಂತ ತ್ವರಿತಗತಿಯಲ್ಲಿ ಕ್ರಮವಹಿಸಬೇಕೆಂದು ಸೂಚಿಸಿದೆ. ಈ ಸಂಬಂಧ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಆರ್ ಅಶೋಕ್ ಮಾತನಾಡಿ, ಅಂತ್ಯ ಸಂಸ್ಕಾರಕ್ಕೆ ಜಮೀನು ಒದಗಿಸಲು ಬೆಂಗಳೂರು ಬೃಹತ್ ಬೆಂಗಳೂರು ಮಹಾನಗರಪಾಲಿಕೆ ಸೇರಿದಂತೆ ರಾಜ್ಯದ ಹಲವಾರು ಮಹಾನಗರ ಪಾಲಿಕೆಗಳಲ್ಲಿ ಕೊವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೆಲವು ಮಹಾನಗರಪಾಲಿಕೆಗಳಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಸಂದರ್ಭದಲ್ಲಿ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕಾಗಿ ಜಮೀನು ಲಭ್ಯವಾಗುತ್ತಿಲ್ಲವೆಂದು ಗಮನಕ್ಕೆ ಬಂದಿದೆ.

ವಿಪಕ್ಷ ನಾಯಕರು ತಾತ್ಕಾಲಿಕ ಸ್ಮಶಾನದ ಬಗ್ಗೆ ಸೂಚಿಸಿದ್ದರು. ಆದರೆ  ಸರ್ಕಾರ ಶಾಶ್ವತ ಪರಿಹಾರಕ್ಕೆ ಚಿಂತನೆ ನಡೆಸಿದೆ. ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ನಗರ ಹಾಗೂ ಹಳ್ಳಿಗಳಿಂದ ಒಂದು ಕಿ.ಲೋ ಮೀಟರ್ ದೂರದಲ್ಲಿ ತಾತ್ಕಾಲಿಕ ಸ್ಮಶಾನ ನಿರ್ಮಿಸಲು ಸೂಚನೆ ನೀಡಿರುವುದಾಗಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com