ಆಕ್ಸಿಜನ್ ಕೊರತೆ ನೀಗಿಸಲು ಸ್ಟೀಲ್ ಕಂಪೆನಿಗಳಿಂದ ಆಕ್ಸಿಜನ್ ಪಡೆಯಲು ನಿರ್ಧಾರ: ಮುರುಗೇಶ್ ನಿರಾಣಿ

ರಾಜ್ಯದಲ್ಲಿ ಕೊರೋನಾ ರೋಗಿಗಳಿಗೆ ಆಕ್ಸಿಜನ್ ಕೊರತೆ ತೀವ್ರಗೊಂಡಿರುವ ಹಿನ್ನಲೆಯಲ್ಲಿ ಗಣಿ ಸಚಿವ ಮುರುಗೇಶ್ ನಿರಾಣಿ ಅವರು ಬುಧವಾರ ಸ್ಟೀಲ್ ಕಂಪನಿಗಳ ಜೊತೆ ಸಭೆ ನಡೆಸಿದರು.
ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ
ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ರೋಗಿಗಳಿಗೆ ಆಕ್ಸಿಜನ್ ಕೊರತೆ ತೀವ್ರಗೊಂಡಿರುವ ಹಿನ್ನಲೆಯಲ್ಲಿ ಗಣಿ ಸಚಿವ ಮುರುಗೇಶ್ ನಿರಾಣಿ ಅವರು ಬುಧವಾರ ಸ್ಟೀಲ್ ಕಂಪನಿಗಳ ಜೊತೆ ಸಭೆ ನಡೆಸಿದರು.

ಇಂದು ವಿಕಾಸಸೌಧಲ್ಲಿ ನಡೆದ ಸಭೆಯಲ್ಲಿ ಸ್ಟೀಲ್ ಕಂಪನಿಗಳಿಂದ ಆಕ್ಸಿಜನ್ ಪಡೆಯುವ ಬಗ್ಗೆ ಚರ್ಚಿಸಿ ಗಣಿಗಾರಿಕೆಗೆ ಉಪಯೋಗವಾಗುವ ಆಕ್ಸಿಜನ್ ಬಳಸಿಕೊಳ್ಳಲು ನಿರ್ಧರಿಸಲಾಯಿತು.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮರುಗೇಶ್ ನಿರಾಣಿ, ರಾಜ್ಯದಲ್ಲಿ ಕೋವಿಡ್ ಹೆಚ್ಚಾಗುತ್ತಿರುವುದರಿಂದ ಆಕ್ಸಿಜನ್ ಕೊರತೆ ಕಂಡುಬಂದಿದೆ. ಪ್ರಸ್ತುತ ಜಿಂದಾಲ್ ನಿಂದ 400 ಟನ್ ಆಕ್ಸಿಜನ್ ಸಿಗುತ್ತಿದೆ. ಬೇರೆ ಸ್ಟೀಲ್ ಪ್ಲಾಂಟ್ ನವರಿಂದ 200 ಟನ್ ಸಿಗಲಿದ್ದು, ಒಟ್ಟು 600 ಟನ್ ಪ್ರತಿದಿನ ಆಕ್ಸಿಜನ್ ಸಿಗಲಿದೆ. ನಮ್ಮ ರಾಜ್ಯಕ್ಕೆ ಪ್ರತಿದಿನ 600 ಟನ್ ಆಕ್ಸಿಜನ್ ಸಾಕಾಗಲಿದೆ ಎಂದರು.

ಬಲ್ಡೋಟಾ ಗಣಿ ಕಂಪನಿ ಬಂದ್ ಮಾಡಿದ್ದರಿಂದ ಈಗ ಅನಿವಾರ್ಯವಾಗಿ ನಮಗೆ ಆಕ್ಸಿಜನ್ ಬೇಕಾಗಿದೆ. ಹಾಗಾಗಿ ಅವರಿಗೆ ಮರುಪ್ರಾರಂಭಿಸುವಂತೆ ಸೂಚಿಸಿದ್ದೇವೆ. ಪ್ರಸ್ತುತ ಸಿಗುತ್ತಿದ್ದ ಆಕ್ಸಿಜನ್ ಕೈಗಾರಿಕೆಗೆ ಸಾಕಾಗುತ್ತಿತ್ತು. ಜೆಎಸ್ ಡಬ್ಲ್ಯೂ ಸ್ಟೀಲ್ ಕಂಪನಿ ಜೊತೆಗೆ ಬೇರೆ ಸ್ಟೀಲ್ ಕಂಪನಿಗಳ ಜೊತೆಯೂ ಸಭೆ ನಡೆಸಿ ಆಕ್ಸಿಜನ್ ಉತ್ಪಾದಿಸಲು ಸೂಚಿಸಲಾಗಿದೆ ಎಂದರು.

ರೋಗಿಗಳ ಸಂಖ್ಯೆ ಹೆಚ್ಚಾದರೆ ಆಕ್ಸಿಜನ್ ಪ್ರಮಾಣವೂ ಹೆಚ್ಚು ಬೇಕಾಗುತ್ತದೆ. ಎಷ್ಟು ಬೇಕು ಎಂಬುದರ ಬಗ್ಗೆ ನಿಖರವಾದ ಮಾಹಿತಿಯಿಲ್ಲ. ಈ ಬಗ್ಗೆ ಆರೋಗ್ಯ ಸಚಿವರ ಜೊತೆ ಚರ್ಚಿಸಬೇಕು. ನಾನೇ ಖುದ್ದು ಅಕ್ಸಿಜನ್ ವಿಚಾರದಲ್ಲಿ ಮುಂದೆ ಬಂದಿದ್ದೇನೆ. ಮುಂದೆ ಬಂದು ಸ್ಟೀಲ್ ಕಂಪನಿಗಳ ಜೊತೆ ಚರ್ಚಿಸಿರುವುದಾಗಿ ಮುರುಗೇಶ್ ನಿರಾಣಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com