15 ದಿನಗಳ ನಂತರ ಸಾರಿಗೆ ನೌಕರರ ಮುಷ್ಕರ ಅಂತ್ಯ, ನಿಟ್ಟುಸಿರು ಬಿಟ್ಟ ಪ್ರಯಾಣಿಕರು

6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಕಳೆದ 15 ದಿನಗಳಿಂದ ನಡೆಯುತ್ತಿದ್ದ ಸಾರಿಗೆ ನೌಕರರ ಮುಷ್ಕರ ಬುಧವಾರ ಅಂತ್ಯವಾಗಿದ್ದು, ಬಸ್ ಸಂಚಾರ ಇಲ್ಲದೆ ಸಂಕಷ್ಟಕ್ಕೀಡಾಗಿದ್ದ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಕಳೆದ 15 ದಿನಗಳಿಂದ ನಡೆಯುತ್ತಿದ್ದ ಸಾರಿಗೆ ನೌಕರರ ಮುಷ್ಕರ ಬುಧವಾರ ಅಂತ್ಯವಾಗಿದ್ದು, ಬಸ್ ಸಂಚಾರ ಇಲ್ಲದೆ ಸಂಕಷ್ಟಕ್ಕೀಡಾಗಿದ್ದ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.

ಇಂದು ಸಂಜೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಾರಿಗೆ ನೌಕರರ ಸಂಘದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು, ಹೈಕೋರ್ಟ್ ಆದೇಶ ಗೌರವಿಸಿ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆಯುತ್ತಿದ್ದೇವ ಎಂದು ಘೋಷಿಸಿದರು.

ಸಾರಿಗೆ ನೌಕರರ ಮುಷ್ಕರದಲ್ಲಿ ಹೈಕೋರ್ಟ್ ಮಧ್ಯ ಪ್ರವೇಶಿಸಿದೆ. ಕೋವಿಡ್ ಕಾರಣದಿಂದ ಕರ್ತವ್ಯಕ್ಕೆ ಹಾಜರಾಗಿ ಎಂದು ನ್ಯಾಯಮೂರ್ತಿಗಳ ಸೂಚನೆ ನೀಡಿದ್ದಾರೆ. ಅವರ ಸೂಚನೆಯನ್ನು ನಾವು ಗೌರವಿಸುತ್ತೇವೆ. ಹೈಕೋರ್ಟ್ ಆದೇಶದಂತೆ ಕರ್ತವ್ಯಕ್ಕೆ ಹಾಜರಾಗುತ್ತೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.

ಇಂದು ಸಂಜೆಯಿಂದಲೇ ಬಸ್ಸುಗಳ ಸಂಚಾರ ಆರಂಭವಾಗುತ್ತಿದೆ. ಎರಡನೇ ಪಾಳಿಯಲ್ಲಿರುವವರು ಕರ್ತವ್ಯಕ್ಕೆ ಹಾಜರಾಗಲಿದ್ದು, ನಾಳೆಯಿಂದ ಎಲ್ಲರೂ ಕೆಲಸಕ್ಕೆ ಹಾಜರಾಗಲಿದ್ದಾರೆ ಎಂದರು.

ಮುಷ್ಕರದ ವೇಳೆ 2169 ನೌಕರರನ್ನು ವಜಾ ಮಾಡಿದೆ. 2941 ನೌಕರರನ್ನು ಅಮಾನತು ಮಾಡಿದೆ. 7646 ನೌಕರರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. 8 ಸಾವಿರ ನೌಕರರನ್ನು ವರ್ಗಾವಣೆ ಮಾಡಲಾಗಿದೆ. ರಾಜ್ಯ ಸರ್ಕಾರ ಈ ಎಲ್ಲಾ ನಿರ್ಧಾರಗಳನ್ನು ವಾಪಸ್ ಪಡೆಯಬೇಕು. ನೌಕರರ ವಿರುದ್ಧ ಕೈಗೊಂಡ ಕ್ರಮಗಳನ್ನು ಕೈಬಿಡಬೇಕು ಎಂದು ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com