ಕೋವಿಡ್-19: ಸೋಂಕು ಪೀಡಿತರಿಗೆ ಶೇ.50 ಹಾಸಿಗೆ ಮೀಸಲಿಡದ 66 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್

ರಾಜ್ಯ ಸರ್ಕಾರದ ಆದೇಶದಂತೆ ಶೇ.50ರಷ್ಟು ಹಾಸಿಗೆಗಳನ್ನು ಕೋವಿಡ್ ಸೋಂಕಿತರಿಗೆ ಮೀಸಲಿಡದ 66 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ತುರ್ತು ನೋಟಿಸ್ ಜಾರಿಗೊಳಿಸಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯ ಸರ್ಕಾರದ ಆದೇಶದಂತೆ ಶೇ.50ರಷ್ಟು ಹಾಸಿಗೆಗಳನ್ನು ಕೋವಿಡ್ ಸೋಂಕಿತರಿಗೆ ಮೀಸಲಿಡದ 66 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ತುರ್ತು ನೋಟಿಸ್ ಜಾರಿಗೊಳಿಸಿದ್ದಾರೆ. 

ಕೋವಿಡ್ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲು ಶೇ.50ರಷ್ಟು ಹಾಸಿಗೆಗಳನ್ನು ಮೀಸಲಿಡುವಂತೆ ಸೂಚಿಸಿದ್ದರೂ ಹಲವು ಖಾಸಗಿ ಆಸ್ಪತ್ರೆಗಳು ಹಾಸಿಗೆ ಮೀಸಲಿಟ್ಟಿಲ್ಲ. ಇನ್ನೂ ಕೆಲವು ಆಸ್ಪತ್ರೆಗಳು ನಾನ್ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದು, ಹಂತ, ಹಂತವಾಗಿ ಕೋವಿಡ್ ಸೋಂಕಿತರಿಗಾಗಿ ಹಾಸಿಗೆ ಮೀಸಲಿಡುವುದಾಗಿ ಸಮಜಾಯಿಷಿ ನೀಡಿವೆ. 

ಈ ಹಿನ್ನೆಲೆಯಲ್ಲಿ ಈ ವರೆಗೆ ಶೇ.50ರಷ್ಟು ಹಾಸಿಗೆ ಮೀಸಲಿಡದ ಫೋರ್ಟಿಸ್, ಅಪೋಲೋ, ಆಕ್ಸಿಸ್, ಎಸಿಇ ಸುಹಾಸ್, ಅಗಾಡಿ, ರಾಜಾಜಿನಗರದ ಅನನ್ಯಾ, ಆರ್ಟೀಮ್, ಅಥ್ರೇಯಾ, ಆರ್ಟಿಯಮ್, ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೋಎಂಟರಾಲಜಿ, ಮತ್ತು ಬ್ಲಾಸಮ್ ಫರ್ಟಿಲಿಟಿ ಸೆಂಟರ್ ಆಸ್ಪತ್ರೆ ಸೇರಿದಂತೆ ಒಟ್ಟು 66 ಆಸ್ಪತ್ರೆಗಳಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com