ಪಾದಚಾರಿ ಮಾರ್ಗದಲ್ಲಿ ವಾಹನ ನಿಲುಗಡೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ನಗರದ ಪಾದಚಾರಿ ಮಾರ್ಗಗಳಲ್ಲಿ ವಾಹನ ನಿಲುಗಡೆ ಮಾಡುವವರ ವಿರುದ್ಧ ಕ್ರಿಮಿನಲ್ ಪ್ರಕಱಣ ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್ ಸೂಚನೆ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ನಗರದ ಪಾದಚಾರಿ ಮಾರ್ಗಗಳಲ್ಲಿ ವಾಹನ ನಿಲುಗಡೆ ಮಾಡುವವರ ವಿರುದ್ಧ ಕ್ರಿಮಿನಲ್ ಪ್ರಕಱಣ ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್ ಸೂಚನೆ ನೀಡಿದೆ. 

ಈ ಕುರಿತು ಬೆಂಗಳೂರಿನ ವಕೀಲ ರಾಮಚಂದ್ರ ರೆಡ್ಡಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ಪೀಠ ಈ ಮಹತ್ವದ ಆದೇಶ ಹೊರಡಿಸಿದೆ. 

ಪಾದಚಾರಿ ಮಾರ್ಗ, ಇರುವುದು ಪಾದಚಾರಿಗಳು ಯಾವುದೇ ಅಡೆತಡೆ ಇಲ್ಲದೆ ಸುರಕ್ಷಿತವಾಗಿ ನಡೆದಾಡುವುದಕ್ಕೆ. ಆ ಜಾಗದಲ್ಲಿ ವಾಹನಗಳ ಪಾರ್ಕಿಂಗ್ ಮಾಡುವುದು ಕಾನೂನು ಬಾಹಿರ. ಸಂಚಾರಕ್ಕೆ ಅಡ್ಡಿಯಾಗುವಂತೆಯೂ ವಾಹನ ನಿಲುಗಡೆ ಮಾಡುವಂತಿಲ್ಲ. ಹೀಗಾಗಿ, ಪಾದಚಾರಿ ಮಾರ್ಗಗಳ ಮೇಲೆ ವಾಹನ ನಿಲುಗಡೆ ಮಾಡಿದವರಿಗೆ ದಂಡ ವಿಧಿಸಬೇಕು. ಅಲ್ಲದೆ, ಮೋಟಾರು ವಾಹನ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ ಅಡಿ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಜರುಗಿಸಬೇಕು ಎಂದು ಆದೇಶಿಸಿದೆ. 

ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಪೊಲೀಸರಿಗೆ ಹಾಗೂ ಬಿಬಿಎಂಪಿಗೆ ಸೂಚಿಸಿ ಸುತ್ತೋಲೆ ಹೊರಡಿಸಬೇಕು ಎಂದು ಸರ್ಕಾರಕ್ಕೆ ನ್ಯಾಯಪೀಠ ನಿರ್ದೇಶನ ನೀಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com