ಶವ ಸಂಸ್ಕಾರ ಸ್ಥಳದಲ್ಲಿ ಪೊಲೀಸರ ನಿಯೋಜನೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಕೊರೋನಾ ಸೋಂಕು ಕೈಮೀರಿ ಹೋಗುತ್ತಿರುವ ಬೆಂಗಳೂರಿನಲ್ಲಿ ಕೊರೋನಾ ಸೋಂಕಿಗೆ ಮೃತಪಟ್ಟವರ ಅಂತ್ಯಕ್ರಿಯೆ ಮಾಡುವುದು ಭಾರೀ ಸಮಸ್ಯೆಯಾಗಿದೆ. ಶವಸಂಸ್ಕಾರದಲ್ಲಿ ಗಂಟೆಗಟ್ಟಲೆ ಸಾಲು ನಿಂತು ಮೃತರ ಅಂತ್ಯ ಸಂಸ್ಕಾರ ಮಾಡಬೇಕಿದೆ.
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೊರೋನಾ ಸೋಂಕು ಕೈಮೀರಿ ಹೋಗುತ್ತಿರುವ ಬೆಂಗಳೂರಿನಲ್ಲಿ ಕೊರೋನಾ ಸೋಂಕಿಗೆ ಮೃತಪಟ್ಟವರ ಅಂತ್ಯಕ್ರಿಯೆ ಮಾಡುವುದು ಭಾರೀ ಸಮಸ್ಯೆಯಾಗಿದೆ. ಶವಸಂಸ್ಕಾರದಲ್ಲಿ ಗಂಟೆಗಟ್ಟಲೆ ಸಾಲು ನಿಂತು ಮೃತರ ಅಂತ್ಯ ಸಂಸ್ಕಾರ ಮಾಡಬೇಕಿದೆ. ಅಂತ್ಯಸಂಸ್ಕಾರಕ್ಕೆ ಸಹ ಸಾಕಷ್ಟು ಸಮಸ್ಯೆಯಿದೆ, ಕೆಲವರಿಗೆ ಅಂತ್ಯಸಂಸ್ಕಾರ ಮಾಡಲು ಸಹ ಸ್ಥಳ ಸಿಗುತ್ತಿಲ್ಲ ಎನ್ನುತ್ತಿದ್ದಾರೆ.

ಇಂತಹ ಸಂದರ್ಭದಲ್ಲಿ ಶವ ಸಂಸ್ಕಾರದ ಸ್ಥಳದಲ್ಲೂ ಪೋಲಿಸರನ್ನು ನೇಮಿಸುತ್ತೇವೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಕಂದಾಯ ಸಚಿವರು ಶವ ಸಂಸ್ಕಾರಕ್ಕೆ ಸ್ಥಳದ ಪರಿಶೀಲನೆ ನಡೆಸಿದ್ದಾರೆ. ಶವ ಸಂಸ್ಕಾರದ ಸ್ಥಳದಲ್ಲೂ ಪೋಲಿಸರನ್ನು ನೇಮಿಸ್ತೇವೆ. ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.

ಇಂದು ಅಥವಾ ನಾಳೆ ಶವಸಂಸ್ಕಾರ ನಡೆಯುತ್ತದೆ. ಕೊರೋನಾ ವಿರುದ್ಧ ನಮ್ಮ ಹೋರಾಟ ಮುಂದುವರೆಯುತ್ತದೆ. ಎಲ್ಲಾ ಸಚಿವರು ಕೆಲಸ ಮಾಡ್ತಿದ್ದಾರೆ. ವೇಗವಾಗಿ ಹರಡಿದ್ದರಿಂದ ಈ ಸಮಸ್ಯೆ ಎದುರಾಗಿದೆ. ಇದನ್ನು ನಿಯಂತ್ರಿಸುವ ಎಲ್ಲಾ ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com