ರೆಮ್ಡೆಸಿವಿರ್'ಗಿಂತ ಸ್ಟೆರಾಯಿಡ್ ಪರಿಣಾಮಕಾರಿ: ಸಚಿವ ಸುಧಾಕರ್

ಕೊರೋನಾ ಸಂಜೀವಿನಿ ಎಂದು ಬಿಂಬಿತವಾಗಿರುವ ರೆಮ್ಡೆಸಿವಿರ್ ವೈಜ್ಞಾನಿಕವಾಗಿ ಜೀವನ ರಕ್ಷಾ ಔಷಧವಲ್ಲ, ಜನ ಸಾಮಾನ್ಯರಲ್ಲಿ ಈ ರೀತಿಯ ಅಭಿಪ್ರಾಯ ಮೂಡಿದೆ ಅಷ್ಟೇ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. 
ಸಚಿವ ಸುಧಾಕರ್
ಸಚಿವ ಸುಧಾಕರ್

ಮೈಸೂರು: ಕೊರೋನಾ ಸಂಜೀವಿನಿ ಎಂದು ಬಿಂಬಿತವಾಗಿರುವ ರೆಮ್ಡೆಸಿವಿರ್ ವೈಜ್ಞಾನಿಕವಾಗಿ ಜೀವನ ರಕ್ಷಾ ಔಷಧವಲ್ಲ, ಜನ ಸಾಮಾನ್ಯರಲ್ಲಿ ಈ ರೀತಿಯ ಅಭಿಪ್ರಾಯ ಮೂಡಿದೆ ಅಷ್ಟೇ. ವಿಶ್ವ ಆರೋಗ್ಯ ಸಂಸ್ಥೆಯ ಪಟ್ಟಿಯಲ್ಲೂ ರೆಮ್ಡೆಸಿವಿರ್ ಇಲ್ಲ. ನಾನು ವೈದ್ಯನಾಗಿ ಹೇಳಬೇಕೆಂದರೆ ಅದರ ಬದಲು ಸ್ಟಿರಾಯಿಡ್ ಪರಿಣಾಮಕಾರಿಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. 

ಸುದ್ದಿಗಾರರೊಂಡಿಗೆ ಮಾತನಾಡಿದ ಅವರು, ರೆಮ್ಡೆಸಿವಿರ್ ಗಿಂತ ಕಡಿಮೆ ದರದ ಪರ್ಯಾಯ ಔಷಧಿಗಳಿವೆ. ಕೊರೋನಾ ಕಡಿಮೆಯಾದ ಹಿನ್ನೆಲೆಯಲ್ಲಿ ರೆಮ್ಡೆಸಿವಿರ್ ಉತ್ಪಾದನೆ ನಿಲ್ಲಿಸಲಾಗಿತ್ತು. ಈಗ ಮತ್ತೆ ಕೊರೋನಾ ಸೋಂಕು ಹೆಚ್ಚಾಗಿದ್ದರಿಂದ ಬೇಡಿಕೆಯೂ ಹೆಚ್ಚಾಗಿದೆ. ಸ್ವಲ್ಪ ದಿನದಲ್ಲಿ ಪೂರೈಕೆ ಸರಿಯಾಗುತ್ತದೆ. ದೇಶದಲ್ಲಿ 8 ರಿಂದ 9 ಕಂಪನಿಗಳು ಮಾತ್ರ ರೆಮ್ಡೆಸಿವಿರ್ ಉತ್ಪಾದಿಸುತ್ತವೆ ಎಂದು ತಿಳಿಸಿದ್ದಾರೆ. 

ಇದೇ ವೇಳೆ ರೆಮ್ಡೆಸಿವಿರ್ ಕಾಳಸಂತೆಯಲ್ಲಿ ಮಾರಾಟವಾದರೆ ಡ್ರಗ್ಸ್ ಕಂಟ್ರೋಲ್ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಿದೆ ಎಂದು ಎಚ್ಚರಿಸಿದ್ದಾರೆ. 

ಆಕ್ಸಿಜನ್ ಸಮಸ್ಯೆ ಕುರಿತು ಪ್ರತಿಕ್ರಿಯೆ ನೀಡಿ, ಆಕ್ಸಿಜನ್ ವಿಚಾರವಾಗಿ ಕೇಂದ್ರ ಆರೋಗ್ಯ ಸಚಿವರಿಗೆ ಪತ್ರ ಬರೆಯಲಾಗಿದೆ. ಮುಂದಿನ ತಿಂಗಳವರೆಗೂ ಬೇಕಾಗುವ ಆಕ್ಸಿಜನ್ ಪೂರೈಕೆಗೆ ಮನವಿ ಮಾಡಲಾಗಿದೆ. ಸದ್ಯ ಆಕ್ಸಿಜನ್ ಸಮಸ್ಯೆ ಇಲ್ಲ. ಕೊರತೆ ಬಗ್ಗೆ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಜೊತೆ ಮಾತನಾಡಿದ್ದೇನೆಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com