ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ: ಬೆಂಗಳೂರಿನಲ್ಲಿ 149 ಸೇರಿ 208 ಬಲಿ, 29,438 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಶನಿವಾರ ಒಂದೇ ದಿನ ಬರೋಬ್ಬರಿ 208 ಮಂದಿ ಬಲಿಯಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಶನಿವಾರ ಒಂದೇ ದಿನ ಬರೋಬ್ಬರಿ 208 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 14283ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ  29,438 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 13,04,397ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 17,342 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 6.32,923ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 149 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 9058 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 10,55,612ಕ್ಕೆ ಏರಿಕೆಯಾಗಿದೆ. ಇನ್ನು 2,34483 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 1280 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com