ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೊರೋನಾದಿಂದ ಗುಣಮುಖ

ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೊರೋನಾ ಸೋಂಕಿನಿಂದ ಗುಣಮುಖವಾಗಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿ
ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೊರೋನಾ ಸೋಂಕಿನಿಂದ ಗುಣಮುಖವಾಗಿದ್ದಾರೆ.

ಈ ಬಗ್ಗೆ ಟ್ವೀಟ್ ಮೂಲಕ ತಿಳಿಸಿರುವ ಕುಮಾರಸ್ವಾಮಿ "ನಿಮ್ಮೆಲ್ಲರ ಪ್ರೀತಿ, ಅಕ್ಕರೆ, ಪ್ರಾರ್ಥನೆಯ ಫಲವಾಗಿ ನಾನು ಇಂದು ಕೊರೋನಾ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ಬಂದಿದ್ದೇನೆ. ನಿಮ್ಮೆಲ್ಲರ ಪ್ರೀತಿಯ ಕಾಳಜಿಗೆ ನನ್ನ ಪ್ರಣಾಮಗಳು. 

"ಇನ್ನೂ ಎರಡು ವಾರಗಳ ಕಾಲ ವೈದ್ಯರ ಸಲಹೆ ಮೇರೆಗೆ ಸಾರ್ವಜನಿಕರನ್ನು ಭೇಟಿ ಮಾಡಲು ಸಾಧ್ಯವಿಲ್ಲ. ದಯಮಾಡಿ ಸಹಕರಿಸಿ. ನಿಮ್ಮ ಪ್ರೀತಿಯ ಋಣಭಾರ ನನ್ನ ಮೇಲೆ ಸದಾ ಹೀಗೆ ಇರಲಿ." ಎಂದು ಬರೆದುಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com