ಯಡಿಯೂರಪ್ಪ
ಯಡಿಯೂರಪ್ಪ

ಹಾಸಿಗೆ, ಆಮ್ಲಜನಕದ ಕೊರತೆ ಇದ್ದರೆ ನನ್ನ ಗಮನಕ್ಕೆ ತನ್ನಿ: ಡಿಸಿಗಳಿಗೆ ಸಿಎಂ ಯಡಿಯೂರಪ್ಪ ಕಟ್ಟುನಿಟ್ಟಿನ ಸೂಚನೆ

ಯಾವುದೇ ಕ್ಷಣದಲ್ಲಿ ಆಮ್ಲಜನಕದ ಕೊರತೆಯನ್ನು ತನ್ನ ಗಮನಕ್ಕೆ ತರುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಎಲ್ಲಾ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬೆಂಗಳೂರು: ಯಾವುದೇ ಕ್ಷಣದಲ್ಲಿ ಆಮ್ಲಜನಕದ ಕೊರತೆಯನ್ನು ತನ್ನ ಗಮನಕ್ಕೆ ತರುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಎಲ್ಲಾ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಖಾಸಗಿ ಆಸ್ಪತ್ರೆಗಳು ಸೇರಿದಂತೆ ಎಲ್ಲಾ ಆಸ್ಪತ್ರೆಗಳಲ್ಲಿ ಆಮ್ಲಜನಕ ಮತ್ತು ಹಾಸಿಗೆಗಳ ದಾಸ್ತಾನು ವಿವರಗಳನ್ನು ಮುಖ್ಯಮಂತ್ರಿಗಳು ಸಂಗ್ರಹಿಸಿದರು ಮತ್ತು ಯಾವುದೇ ಆಸ್ಪತ್ರೆಗಳಲ್ಲಿ ಹಾಸಿಗೆಗಳು ಅಥವಾ ಆಮ್ಲಜನಕದ ಕೊರತೆ ಇದ್ದಲ್ಲಿ ಅದನ್ನು ಅವರ ಗಮನಕ್ಕೆ ತರಬೇಕು ಎಂದು ಸೂಚನೆ ನೀಡಿದರು.

"ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಹಾಸಿಗೆ ಮತ್ತು ಆಕ್ಸಿಜನ್ ಬಗ್ಗೆ ಮಾಹಿತಿ ಪಡೆದರು. ಆಕ್ಸಿಜನ್, ರೆಮಿಡಿಸಿವರ್ ನಲ್ಲಿ ಕೊರತೆ ಕಂಡುಬಂದರೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ಅಥವಾ ತಮ್ಮ ಗಮನಕ್ಕೆ ತರಬೇಕು ಎಂದು ಸೂಚಿಸಿದ್ದಾರೆ. ಯಾವುದೇ ಕಾರಣಕ್ಕೂ ಆಕ್ಸಿಜನ್ ಸರಬರಾಜು ಜಾಲದಲ್ಲಿ ವ್ಯತ್ಯಯ ಉಂಟಾಗದಂತೆ ಕ್ರಮ‌ವಹಿಸಬೇಕು, ಜೊತೆಗೆ ಯಾವುದೇ ತಕ್ಷಣದ ಅಗತ್ಯತೆ ಕಂಡು ಬಂದರೆ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ಅಥವಾ ತಮ್ಮ ಗಮನಕ್ಕೆ ಕೂಡಲೇ ತರಬೇಕು ಎಂದು ಮುಖ್ಯಮಂತ್ರಿಗಳು  ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ."

Related Stories

No stories found.

Advertisement

X
Kannada Prabha
www.kannadaprabha.com