ಶೇ.80ರಷ್ಟು ಹಾಸಿಗೆ ಕೊರೋನಾ ಸೋಂಕಿತರಿಗೆ ಮೀಸಲಿಡುವಂತೆ ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಲು ಸರ್ಕಾರ ಚಿಂತನೆ!

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಸರ್ಕಾರಕ್ಕೆ ಭಾರೀ ಸವಾಲನ್ನು ಎದುರು ಮಾಡಿದ್ದು, ಹೀಗಾಗಿ ಪರಿಸ್ಥಿತಿ ನಿಭಾಯಿಸಲು ಖಾಸಗಿ ಆಸ್ಪತ್ರೆಗಳಿಗೆ ಪ್ರಸ್ತುತ ಸೂಚಿಸಿರುವ ಶೇ.50 ರಷ್ಟು ಹಾಸಿಗೆ ಮೀಸಲಿಡುವುದನ್ನು ಶೇ.80ಕ್ಕೆ ಹೆಚ್ಚಿಸುವಂತೆ ಸೂಚಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಸರ್ಕಾರಕ್ಕೆ ಭಾರೀ ಸವಾಲನ್ನು ಎದುರು ಮಾಡಿದ್ದು, ಹೀಗಾಗಿ ಪರಿಸ್ಥಿತಿ ನಿಭಾಯಿಸಲು ಖಾಸಗಿ ಆಸ್ಪತ್ರೆಗಳಿಗೆ ಪ್ರಸ್ತುತ ಸೂಚಿಸಿರುವ ಶೇ.50 ರಷ್ಟು ಹಾಸಿಗೆ ಮೀಸಲಿಡುವುದನ್ನು ಶೇ.80ಕ್ಕೆ ಹೆಚ್ಚಿಸುವಂತೆ ಸೂಚಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ಶುಕ್ರವಾರ ರಾತ್ರಿಯಷ್ಟೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಈ ಕುರಿತು ಶೀಘ್ರದಲ್ಲಿಯೇ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಗರದಲ್ಲಿ ವೆಂಟಿಲೇಟರ್ ಲಭ್ಯತೆಯನ್ನು 10 ರಟ್ಟು ಹೆಚ್ಚಿಸಲು ಮುಖ್ಯಮಂತ್ರಿಗಳು ಸೂಚಿಸಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲ್ಲದೇ, ಬೆಂಗಳೂರಿನ ಆಸ್ಪತ್ರೆಗಳ ಆವರಣದಲ್ಲಿ ಮೇಕ್ ಶಿಫ್ಟ್ ಆಸ್ಪತ್ರೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. 

ನಗರದ ಬೌರಿಂಗ್, ನಿಮ್ಹಾನ್, ರಾಜೀವ್ ಗಾಂಧಿ ಸೇರಿದಂತೆ ಇತರೆ ಆಸ್ಪತ್ರೆಗಳ ಆವರಣದಲ್ಲಿ ಮೇಕ್ ಶಿಫ್ಟ್ ಆಸ್ಪತ್ರೆ ಮಾಡಲಾಗುತ್ತದೆ. ಬೆಂಗಳೂರಿನಲ್ಲಿ ಆಮ್ಲಜನಕ ಹಾಸಿಗೆ, ಐಸಿಯು ಹಾಸಿಗೆ, ವೆಂಟಿಲೇಟರ್ ಕೊರತೆಯಾಗುತ್ತಿದೆ. 15 ದಿನದಲ್ಲಿ ಕನಿಷ್ಟ ಎರಡು ಸಾವಿರ ಐಸಿಯು ಹಾಸಿಗೆಯ ಮೇಕ್ ಶಿಫ್ಟ್ ಆಸ್ಪತ್ರೆ ಮಾಡಲಾಗುವುದು. ಎರಡು ಸಾವಿರ ಪೈಕಿ 800ಕ್ಕೆ ವೆಂಟಿಲೇಟರ್ ಅಳವಡಿಕೆಯಾಗಲಿದೆ. ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿಯೇ ಮೇಕ್ ಶಿಫ್ಟ್ ನಲ್ಲಿ 250 ಹಾಸಿಗೆಯ ಐಸಿಯು, ಮತ್ತೊಂದು ಹೊಸ ಕಟ್ಟಡದಲ್ಲಿ 150-200 ಹಾಸಿಗೆಯ ಐಸಿಯು ಮಾಡಲಾಗುತ್ತಿದೆ. 250 ಹಾಸಿಗೆಯ ಐಸಿಯುವಿನಲ್ಲಿ 100ಕ್ಕೆ ವೆಂಟಿಲೇಟರ್ ಅಳವಡಿಸಲಾಗುತ್ತದೆ ಎಂದು ವಿವರಿಸಿದರು. 

ರೆಮ್'ಡಿಸಿವಿರ್ ವೈಲ್ ನಿರಂತರ ಪೂರೈಕೆಯಾಗುತ್ತಿದೆ. ಹೆಚ್ಚುವರಿಯಾಗಿ 25 ಸಾವಿರ ಪಡೆಯಲು ಕೇಂದ್ರ ರಾಸಾಯನಿಕ ಸಚಿವ ಡಿ.ವಿ.ಸದಾನಂದಗೌಡ ಅವಕಾಶ ಮಾಡಿಕೊಟ್ಟಿದ್ದಾರೆ. ಬಯೋಕಾನ್ ಮುಖ್ಯಸ್ಥೆ ಮಜುಂದಾರ್ ಷಾ ಅವರೊಂದಿಗೆ ಚರ್ಚಿಸಲಾಗಿದೆ. 10 ದಿನದೊಳಗೆ 10 ಸಾವಿರ ವೈಲ್ ಕೊಡುವುದಾಗಿ ಹೇಳಿದ್ದಾರೆ. ಈ ತಿಂಗಳಲ್ಲಿಯೇ 50-60 ಸಾವಿರ ವೈಲ್ ನೀಡುವುದಾಗಿ ತಿಳಿಸಿದ್ದಾರೆ. ವಿದೇಶದಿಂದ ಒಂದೇ ಬಾರಿಗೆ 2 ಲಕ್ಷ ರೆಮ್'ಡೆಸಿವಿರ್ ವೈರ್ ತರಿಸಿಕೊಳ್ಳಲು ಸಿದ್ಧತೆ ಮಾಡುತ್ತಿದ್ದೇವೆ. ಇದಕ್ಕಾಗಿ ಕೇಂದ್ರ ಸರ್ಕಾರದ ಅನುಮತಿ ಬೇಕಿದೆ. ಇಷ್ಟು ದೊರೆತರೆ 15-20 ದಿನಕ್ಕಾಗುತ್ತದೆ ಎಂದು ಮಾಹಿತಿ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com