ರಾಜ್ಯದಲ್ಲಿ ಕೊರೋನಾ ಬ್ಲಾಸ್ಟ್: ಇಂದು ಬೆಂಗಳೂರಿನಲ್ಲಿ 16,545 ಸೇರಿ 29,744 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಸೋಮವಾರ ಒಂದೇ ದಿನ ಬರೋಬ್ಬರಿ 201 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 14,627ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಸೋಮವಾರ ಒಂದೇ ದಿನ ಬರೋಬ್ಬರಿ 201 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 14,627ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 29,744 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 13,68,945ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 16,545 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 6,70,201ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 105 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 10,663 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 10,73,257ಕ್ಕೆ ಏರಿಕೆಯಾಗಿದೆ. ಇನ್ನು 2,81,042 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 1,815 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com