ಕೋವಿಡ್-19: ವಿಕ್ಟೋರಿಯಾ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳಲ್ಲಿ ಐಸಿಯು ಬೆಡ್ ಗಳ ವ್ಯವಸ್ಥೆ- ಸಚಿವ ಡಾ.ಕೆ ಸುಧಾಕರ್

ಐಸಿಯು ಬೆಡ್ ಗಳ ಕೊರತೆ ನೀಗಿಸಲು ವಿಕ್ಟೋರಿಯಾ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಐಸಿಯು ಬೆಡ್ ಗಳ ವ್ಯವಸ್ಥೆ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಆರೋಗ್ಯ  ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.
ಆರೋಗ್ಯ ಸಚಿವ ಡಾ.ಕೆ ಸುಧಾಕರ್
ಆರೋಗ್ಯ ಸಚಿವ ಡಾ.ಕೆ ಸುಧಾಕರ್

ಬೆಂಗಳೂರು: ಬೆಂಗಳೂರಿನಲ್ಲಿ ಕೋವಲಿಡ್-19 ಸೋಂಕಿತರ ಪ್ರಮಾಣ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಐಸಿಯು ಬೆಡ್ ಗಳ ಕೊರತೆ ನೀಗಿಸಲು ವಿಕ್ಟೋರಿಯಾ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಐಸಿಯು ಬೆಡ್ ಗಳ ವ್ಯವಸ್ಥೆ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಆರೋಗ್ಯ  ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.

ವಿಕ್ಟೋರಿಯಾ ಕ್ಯಾಂಪಸ್ ನಲ್ಲಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್ ಅವರು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮತ್ತು ಇತರೆ ವೈದ್ಯಕೀಯ ಬೋಧನಾ ಆಸ್ಪತ್ರೆಗಳ ಆವರಣಗಳಲ್ಲಿ ಮಾಡ್ಯುಲರ್ ಐಸಿಯು ಮತ್ತು ವೆಂಟಿಲೇಟರ್ ಹಾಸಿಗೆಗಳನ್ನು ಸ್ಥಾಪಿಸುವ ಬಗ್ಗೆ ರಾಜ್ಯ ಸರ್ಕಾರ  ಯೋಚಿಸುತ್ತಿದೆ. ಒಂದು ಕಟ್ಟಡದಲ್ಲಿ 85 ಹಾಸಿಗೆಗಳು ಮತ್ತು ಪಿಎಂಎಸ್ಎಸ್ ಎಸ್ ವೈ ಅಡಿಯಲ್ಲಿ 180 ಹಾಸಿಗೆಗಳನ್ನು ಕೋವಿಡ್-19ಗೆ ಕಾಯ್ದಿರಿಸಲಾಗುವುದು. ಇದರೊಂದಿಗೆ ಇಲ್ಲಿ ಮತ್ತು ಇತರ ವೈದ್ಯಕೀಯ ಕಾಲೇಜು ಆಸ್ಪತ್ರೆ ಆವರಣಗಳಲ್ಲಿ 100-150 ಹಾಸಿಗೆ ಸಾಮರ್ಥ್ಯದ ತಾತ್ಕಾಲಿಕ ಆಸ್ಪತ್ರೆಗಳನ್ನು  ಸ್ಥಾಪಿಸಲಾಗುವುದು ಎಂದು ಹೇಳಿದರು.

ಬೆಂಗಳೂರಿಗೆ 5,000 ಮತ್ತು ಎಲ್ಲಾ ಜಿಲ್ಲೆಗಳಿಗೆ ತಲಾ 1,000 ಪೋರ್ಟಬಲ್ ಆಕ್ಸಿಜನ್ ಜನರೇಟರ್ ಗಳನ್ನು ಒದಗಿಸಲಾಗುವುದು. ಅಲ್ಲದೆ, ಎಲ್ಲಾ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಶೇಕಡಾ 75 ರಷ್ಟು ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿಡಲಾಗುವುದು ಮತ್ತು 15 ದಿನಗಳಲ್ಲಿ ಎಲ್ಲಾ ಸರ್ಕಾರಿ  ಆಸ್ಪತ್ರೆಗಳಲ್ಲಿ ತಾತ್ಕಾಲಿಕ ಘಟಕಗಳಲ್ಲಿ 2,000-3,000 ಹೆಚ್ಚುವರಿ ಹಾಸಿಗೆಗಳನ್ನು ಸ್ಥಾಪಿಸಲಾಗುವುದು. ರಾಜ್ಯಕ್ಕೆ 1,22,000 ರೆಮ್‌ಡೆಸಿವಿರ್ ಚುಚ್ಚುಮದ್ದುಗಳನ್ನು ಹಂಚಿಕೆ ಮಾಡಲು ಮತ್ತು ವೈದ್ಯಕೀಯ ಆಮ್ಲಜನಕದ ದೈನಂದಿನ ಹಂಚಿಕೆಯನ್ನು 300 ಟನ್‌ಗಳಿಂದ 800 ಟನ್‌ಗಳಿಗೆ ಹೆಚ್ಚಿಸಲು ಕೇಂದ್ರ  ಸರ್ಕಾರವು ಸಮ್ಮತಿಸಿದೆ ಎಂದು ಅವರು ಹೇಳಿದರು. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com