ಕೊರೋನಾ ಕರ್ಫ್ಯೂ: ಅಗತ್ಯ ಸೇವೆ ಒದಗಿಸುವ ಇಲಾಖೆಗಳಿಗೆ ಮಾತ್ರ ಕರ್ತವ್ಯಕ್ಕೆ ಹಾಜರಾಗಲು ಸೂಚನೆ

ರಾಜ್ಯ ಸರ್ಕಾರ 14 ದಿನಗಳ ಕಾಲ ಕೊರೋನಾ ಕರ್ಫ್ಯೂ ಜಾರಿಗೊಳಿಸಿರುವುದರಿಂದ ರಾಜ್ಯ ಸರ್ಕಾರಿ ಸಚಿವಾಲಯದ ಸಿಬ್ಬಂದಿಗೆ ಅಗತ್ಯ ಸೇವೆ ಒದಗಿಸುವ ಆರೋಗ್ಯ, ವೈದ್ಯಕೀಯ ಶಿಕ್ಷಣ, ಒಳಾಡಳಿತ(ಗೃಹ)...
ವಿಧಾನಸೌಧ
ವಿಧಾನಸೌಧ

ಬೆಂಗಳೂರು: ರಾಜ್ಯ ಸರ್ಕಾರ 14 ದಿನಗಳ ಕಾಲ ಕೊರೋನಾ ಕರ್ಫ್ಯೂ ಜಾರಿಗೊಳಿಸಿರುವುದರಿಂದ ರಾಜ್ಯ ಸರ್ಕಾರಿ ಸಚಿವಾಲಯದ ಸಿಬ್ಬಂದಿಗೆ ಅಗತ್ಯ ಸೇವೆ ಒದಗಿಸುವ ಆರೋಗ್ಯ, ವೈದ್ಯಕೀಯ ಶಿಕ್ಷಣ, ಒಳಾಡಳಿತ(ಗೃಹ), ಕಂದಾಯ ಇಲಾಖೆಗಳ ಸಿಬ್ಬಂದಿಗೆ ಮಾತ್ರ ಕಡ್ಡಾಯ ಹಾಜರಿಗೆ ಅವಕಾಶ ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ, ಆಹಾರ ಮತ್ತು ನಾಗರಿಕ ಪೂರೈಕೆ ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಇಂಧನ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಆರ್ಥಿಕ ಇಲಾಖೆ, ಪಶು ಸಂಗೋಪನೆ ಮತ್ತು ಮೀನುಗಾರಿಕೆ, ಕೃಷಿ, ತೋಟಗಾರಿಕೆ, ವಾಣಿಜ್ಯ ಕೈಗಾರಿಕೆ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ಶೇ. 50 ರಷ್ಟು ರೊಟೆಷನ್ ಆಧಾರದ ಮೇಲೆ ಕರ್ತವ್ಯಕ್ಕೆ ಹಾಜರಾಗುವಂತೆ ಸಂಬಂಧ ಪಟ್ಟ ಇಲಾಖೆಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ.

ಉಳಿದ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಾಜರಾತಿಯಿಂದ ವಿನಾಯಿತಿ ನೀಡಲಾಗಿದ್ದು, ವಿನಾಯಿತಿ ಪಡೆದ ಸಿಬ್ಬಂದಿ ಕೇಂದ್ರ ಸ್ಥಾನದಲ್ಲಿ ಇದ್ದು, ಮೇಲಾಧಿಕಾರಿಗಳು ಸೂಚಿಸಿದಾಗ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. 
ಕಚೇರಿಗೆ ಹಾಜರಾಗುವ ಸಿಬ್ಬಂದಿಗೆ ಸಾಧ್ಯವಾದಷ್ಟು ಸರ್ಕಾರಿ ವಾಹನಗಳಲ್ಲಿ ಅವಕಾಶ ಕಲ್ಪಿಸಬೇಕೆಂದು ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ. ಈ ಆದೇಶ ಮೇ 12 ರವರೆಗೆ ಜಾರಿಯಲ್ಲಿರಲಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com