ಖಾಸಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ಶೇ.75ರಷ್ಟು ಹಾಸಿಗೆ ಕೋವಿಡ್ ಚಿಕಿತ್ಸೆಗೆ ಮೀಸಲು: ಸರ್ಕಾರ ಆದೇಶ

ರಾಜ್ಯದಲ್ಲಿ ಕೊರೋನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಸಿಗೆಗಳ ಸಮಸ್ಯೆ ನೀಗಿಸಲು ಖಾಸಗಿ ಆಸ್ಪತ್ರೆಗಳ ತೀವ್ರ ವಿರೋಧವನ್ನು ಪರಿಗಣಿಸದೇ ಎಲ್ಲಾ ಖಾಸಗಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳ ಪೈಕಿ ಶೇ.75ರಷ್ಟನ್ನು ಕಡ್ಡಾಯವಾಗಿ ಕೋವಿಡ್ ಚಿಕಿತ್ಸೆಗೆ ಮೀಸಲಿಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 
ಸಚಿವ ಸುಧಾಕರ್
ಸಚಿವ ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಸಿಗೆಗಳ ಸಮಸ್ಯೆ ನೀಗಿಸಲು ಖಾಸಗಿ ಆಸ್ಪತ್ರೆಗಳ ತೀವ್ರ ವಿರೋಧವನ್ನು ಪರಿಗಣಿಸದೇ ಎಲ್ಲಾ ಖಾಸಗಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳ ಪೈಕಿ ಶೇ.75ರಷ್ಟನ್ನು ಕಡ್ಡಾಯವಾಗಿ ಕೋವಿಡ್ ಚಿಕಿತ್ಸೆಗೆ ಮೀಸಲಿಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

ಪ್ರಕೃತಿ ವಿಕೋಪ ನಿರ್ವಹಣಾ ಕಾಯ್ದೆ ಪರಿಚ್ಛೇದ 24 (ಎಫ್) (ಐ) ಅಡಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಈ ಆದೇಶ ಹೊರಡಿಸಿದ್ದಾರೆಂದು ತಿಳಿದುಬಂದಿದೆ. 

ರಾಜ್ಯದ ಎಲ್ಲಾ ಖಾಸಗಿ ವೈದ್ಯಕೀಯ ಕಾಲೇಜುಗಳು ಸರ್ಕಾರ ಶಿಫಾರಸು ಮಾಡುವ ಕೊರೋನಾ ರೋಗಿಗಳಿಗೆ ಶೇ.75ರಷ್ಟು ಹಾಸಿಗೆಗಳನ್ನು ಬಿಟ್ಟುಕೊಡಬೇಕು. ಒಂದೊಮ್ಮೆ ಸರ್ಕಾರ ನಿಗದಿಪಡಿಸಿದಷ್ಟು ಹಾಸಿಗೆಗಳನ್ನು ಬಿಟ್ಟುಕೊಡದೆ ನಿಯಮ ಉಲ್ಲಂಘನೆ ಮಾಡಿದರೆ, ಅಂತಹ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜು ವಿರುದ್ಧ ಪ್ರಕೃತಿ ವಿಕೋಪ ನಿರ್ವಹಣಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com