ಮೈಸೂರು, ಚಾಮರಾಜನಗರದಲ್ಲಿ ಆಮ್ಲಜನಕ ಸ್ಥಾವರ ಸ್ಥಾಪಿಸಲಿರುವ ಗೇಲ್ ಇಂಡಿಯಾ

ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆಮ್ಲಜನಕ ಕೊರತೆ ನೀಗಿಸಲು ಗೇಲ್ ಇಂಡಿಯಾ ಲಿಮಿಟೆಡ್ ಕಂಪನಿ ಮೈಸೂರು ಮತ್ತು ಚಾಮರಾಜನಗರಗಳಲ್ಲಿ ಆಮ್ಲಜನಕ ಸ್ಥಾವರ ಸ್ಥಾಪಿಸಲಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮಂಗಳೂರು: ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆಮ್ಲಜನಕ ಕೊರತೆ ನೀಗಿಸಲು ಗೇಲ್ ಇಂಡಿಯಾ ಲಿಮಿಟೆಡ್ ಕಂಪನಿ ಮೈಸೂರು ಮತ್ತು ಚಾಮರಾಜನಗರಗಳಲ್ಲಿ ಆಮ್ಲಜನಕ ಸ್ಥಾವರ ಸ್ಥಾಪಿಸಲಿದೆ.

ಕೋವಿಡ್ -19 ರೋಗಿಗಳಿಗೆ ಆಮ್ಲಜನಕದ ಪೂರೈಕೆಯನ್ನು ಹೆಚ್ಚಿಸಲು ಮೈಸೂರು ಮತ್ತು ಚಾಮರಾಜನಗರದಲ್ಲಿ ಪ್ರೆಶರ್ ಸ್ವಿಂಗ್ ಆಡ್ಸರ್ಪ್ಷನ್ (ಪಿಎಸ್ಎ) ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲಿದೆ. ಪ್ರಧಾನಿ ನರೇಂದ್ರ ಮೋದಿ ಘೋಷಿಸಿದಂತೆ ದೇಶಾದ್ಯಂತ ಸ್ಥಾಪಿಸಲಿರುವ 551 ಪಿಎಸ್‌ಎಗಳಲ್ಲಿ ಇದು ಕೂಡ ಒಂದಾಗಲಿದೆ,

ಉತ್ತರ ಪ್ರದೇಶದಲ್ಲಿ ನಾಲ್ಕು, ಮಧ್ಯಪ್ರದೇಶದಲ್ಲಿ ಮೂರು, ಕರ್ನಾಟಕದಲ್ಲಿ ಎರಡು ಮತ್ತು ರಾಜಸ್ಥಾನದಲ್ಲಿ ಒಂದು ಸೇರಿದಂತೆ ಒಟ್ಟು 10 ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪಿಸಲು ಕೇಂದ್ರ ಸರ್ಕಾರವು ಗೇಲ್ ಇಂಡಿಯಾ ಲಿಮಿಟೆಡ್‌ಗೆ ಸೂಚಿಸಿದೆ.

ದಕ್ಷಿಣ ವಿಭಾಗದ ಬೆಂಗಳೂರು ಗೇಲ್ ಇಂಡಿಯಾ ಲಿಮಿಟೆಡ್‌ನ ಕಾರ್ಯನಿರ್ವಾಹಕ ನಿರ್ದೇಶಕ ಪಿ.ಮುರುಗೇಶನ್ ಅವರು ಸೋಮವಾರ ಸೂಚನೆಯನ್ನು ಸ್ವೀಕರಿಸಿದ್ದಾರೆ. ಕೋವಿಡ್ ಪ್ರಕರಣಗಳ ಹೆಚ್ಚಳದೊಂದಿಗೆ ಆಮ್ಲಜನಕದ ಅವಶ್ಯಕತೆ ಹೆಚ್ಚಾದ ಕಾರಣ  ಕೆಲಸ ತ್ವರಿತವಾಗಿ ಪ್ರಾರಂಭವಾಗುತ್ತದೆ.

ಈ ಸ್ಥಳಗಳಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಬಹುಶಃ ಹೊಸ ಸೌಲಭ್ಯ ಬರಲಿದೆ, ಜೊತೆಗೆ ಸ್ಥಾವರಗಳ ನಿರ್ದಿಷ್ಟತೆ, ಅವುಗಳ ಸಾಮರ್ಥ್ಯ ಮತ್ತು ಇತರ ಅಂಶಗಳನ್ನು ರೂಪಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com