ರೈತರಿಗೆ ಅನುಕೂಲ ಕಲ್ಪಿಸಲು ಅಗ್ರಿ ವಾರ್ ರೂಮ್ ಆರಂಭ!

ರಾಜ್ಯ ಸರ್ಕಾರ ರಾಜ್ಯದಲ್ಲಿ ಘೋಷಿಸಿರುವ ಈ ಹದಿನಾಲ್ಕು ದಿನಗಳ ಲಾಕ್ಡೌನ್‌‌ನಲ್ಲಿ ರೈತರಿಗಾಗಲಿ ಕೃಷಿ ಚಟುವಟಿಕೆಗಳಿಗಾಗಲಿ ಯಾವುದೇ ತೊಂದರೆಯಾಗದಿರಲೆಂದು ಕೃಷಿ ಇಲಾಖೆ ಮತ್ತೆ ಅಗ್ರಿವಾರ್ ರೂಮ್ ಆರಂಭಿಸಿದೆ.
ಬಿಸಿ ಪಾಟೀಲ್
ಬಿಸಿ ಪಾಟೀಲ್

ಬೆಂಗಳೂರು: ರಾಜ್ಯ ಸರ್ಕಾರ ರಾಜ್ಯದಲ್ಲಿ ಘೋಷಿಸಿರುವ ಈ ಹದಿನಾಲ್ಕು ದಿನಗಳ ಲಾಕ್ಡೌನ್‌‌ನಲ್ಲಿ ರೈತರಿಗಾಗಲಿ ಕೃಷಿ ಚಟುವಟಿಕೆಗಳಿಗಾಗಲಿ ಯಾವುದೇ ತೊಂದರೆಯಾಗದಿರಲೆಂದು ಕೃಷಿ ಇಲಾಖೆ ಮತ್ತೆ ಅಗ್ರಿವಾರ್ ರೂಮ್ ಆರಂಭಿಸಿದೆ.

ಕಳೆದ ವರ್ಷ ಕೋವಿಡ್ ಲಾಕ್ಡೌನ್ ಅವಧಿಯಲ್ಲಿ ಅಗ್ರಿವಾರ್ ರೂಮ್ ಆರಂಭಿಸಿರುವಂತೆಯೇ ಈ ಬಾರಿಯೂ ರೈತರಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಬೆನ್ನೆಲುಬಾಗಿ ನಿಂತಿದ್ದು ಕೃಷಿ ಇಲಾಖೆಯಲ್ಲಿ "ಅಗ್ರಿ ವಾರ್ ರೂಮ್" ಆರಂಭಿಸಿದ್ದಾರೆ.

ಈಗಾಗಲೇ ಮುಂಗಾರು ಆರಂಭವಾಗುತ್ತಿರುವುದರಿಂದ ಲಾಕ್ಡೌನ್‌ ಅವಧಿಯಲ್ಲಿ ಯಾವುದೇ ಇಲಾಖೆಯಾಗಲೀ ಅಧಿಕಾರಿಗಳಾಗಲೀ ಕೃಷಿ ಪರಿಕರ ಸಾಗಾಣಿಕೆ ರೈತರ ಕೃಷಿ ಚಟುವಟಿಕೆಗಳಿಗೆ ಅಡ್ಡಿಯನ್ನುಂಟು ಮಾಡಬಾರದು ಎಂದು ಕೃಷಿ ಸಚಿವರು ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ. 

ಅಂದ್ಹಾಗೆ ರೈತರಿಗೆ ನೆರವಾಗಲು ಮತ್ತೆ ಅಗ್ರಿ ವಾರ್ ರೂಮ್ ನೆರವು ಕಲ್ಪಿಸಲಿದೆ‌.ಕೃಷಿ ಕೇಂದ್ರ ಕಚೇರಿಯಲ್ಲಿ ಅಗ್ರಿ ವಾರ್ ರೂಮ್ ಮತ್ತೆ ತೆರೆದಿದ್ದು080-22210237 ಹಾಗೂ 080-22212818 ಈ ಸಂಖ್ಯೆಗಳು ಸಹಾಯವಾಣಿಯಾಗಿ ಕಾರ್ಯನಿರ್ವಹಿಸಲಿವೆ‌.ಈ ಸಹಾಯವಾಣಿ ಅಗ್ರಿ ವಾರ್ ರೂಮ್ ಇಂದಿನಿಂದ ಅಂದರೆ ಏ.28ರಿಂದ ಆರಂಭವಾಗಿದ್ದು ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಕಾರ್ಯನಿರ್ವಹಿಸಲಿದೆ.ಇದಕ್ಕಾಗಿ ಕೃಷಿ ಪ್ರಧಾನ ಕಚೇರಿಯಲ್ಲಿ ಇಬ್ಬರು ತಾಂತ್ರಿಕ ಅಧಿಕಾರಿಗಳು ಹಾಗೂ ಒಬ್ಬ ಉಪಕೃಷಿ ನಿರ್ದೇಶಕರು ಉಸ್ತುವಾರಿಗೆ ನೇಮಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com