ಕೋವಿಡ್-19: ಖಾಸಗಿ ಆಸ್ಪತ್ರೆಗಳ ಹಾಸಿಗೆ ಲಭ್ಯತೆ ಕುರಿತು ವೆಬ್'ಸೈಟ್ ಪ್ರಾರಂಭಿಸಲು 'ಫನಾ' ಮುಂದು

ಖಾಸಗಿ ಆಸ್ಪತ್ರೆಗಳ ಹಾಸಿಗೆ ಲಭ್ಯತೆ ಕುರಿತು ಮಾಹಿತಿ ನೀಡಲು ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್‌ ಹೋಂ ಅಸೋಸಿಯೇಷನ್‌ (ಫನಾ) ತನ್ನದೇ ಆದ ವೆಬ್'ಸೈಟ್ ವೊಂದನ್ನು ಪ್ರಾರಂಭಿಸಲು ಮುಂದಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ಸೋಂಕು ಹೆಚ್ಚಾಗುತ್ತಲೇ ಇದ್ದು, ಎಲ್ಲೆಡೆ ಹಾಸಿಗೆಗಳ ಅಭಾವ ಕಾಡತೊಡಗಿದೆ. ಸೋಂಕಿಗೊಳಗಾದ ಜನ ಚಿಕಿತ್ಸೆ ಪಡೆದುಕೊಳ್ಳಲು ಆಸ್ಪತ್ರೆಯಿಂದ ಆಸ್ಪತ್ರೆಗೆ ಓಡಾಡುತ್ತಿರುವ ಘಟನೆಗಳು ಪ್ರತಿನಿತ್ಯ ಕಂಡು ಬರುತ್ತಲೇ ಇವೆ. ಹೀಗಾಗಿ ಖಾಸಗಿ ಆಸ್ಪತ್ರೆಗಳ ಹಾಸಿಗೆ ಲಭ್ಯತೆ ಕುರಿತು ಮಾಹಿತಿ ನೀಡಲು ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್‌ ಹೋಂ ಅಸೋಸಿಯೇಷನ್‌ (ಫನಾ) ತನ್ನದೇ ಆದ ವೆಬ್'ಸೈಟ್ ವೊಂದನ್ನು ಪ್ರಾರಂಭಿಸಲು ಮುಂದಾಗಿದೆ. 

ರಾಜ್ಯದಲ್ಲಿ ಕೊರೋನಾ ಸಾಂಕ್ರಾಮಿಕ ರೋಗ ಆರಂಭವಾದಾಗ ಬಿಬಿಎಂಪಿ ಹಾಸಿಗೆ ಲಭ್ಯತೆ ಕುರಿತು ಮಾಹಿತಿ ನೀಡಲು ವೆಬ್'ಸೈಟ್ ಆರಂಭಿಸಿತ್ತು. ವೆಬ್ ಸೈಟ್ ಮೂಲಕ ಸರ್ಕಾರಿ ಮತ್ತು ಖಾಸಗಿ ಮತ್ತು ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿರುವ ಎಲ್ಲಾ ಹಾಸಿಗೆಗಳ ಕುರಿತು ಮಾಹಿತಿ ನೀಡುವುದಾಗಿ ತಿಳಿಸತ್ತು. ಆದರೆ, ಖಾಸಗಿ ಆಸ್ಪತ್ರೆಗಳಲ್ಲಿರುವ ಹಾಸಿಗೆ ಲಭ್ಯತೆ ಕುರಿತು ವೆಬ್'ಸೈಟ್ ನಲ್ಲಿ ಸೂಕ್ತ ಮಾಹಿತಿಗಳು ಲಭ್ಯವಾಗುತ್ತಿಲ್ಲ. ಇದರಿಂದ ಸಮಸ್ಯೆಗಳಾಗುತ್ತಿದ್ದು, ಹೀಗಾಗಿ ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್‌ ಹೋಂ ಅಸೋಸಿಯೇಷನ್‌ ತನ್ನದೇ ಸ್ವಂತ ವೆಬ್'ಸೈಟ್ ಆರಂಭಿಸಲು ನಿರ್ಧರಿಸಿದೆ. 

ಈ ಕುರಿತು ಪ್ರತಿಕ್ರಿಯೆ ನೀಡಿರುವ ಫನಾ ಅಧ್ಯಕ್ಷ ಡಾ.ಹೆಚ್.ಎಂ.ಪ್ರಸನ್ನ ಅವರು, ನಗರದಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ. ಜನರು ಹಾಸಿಗೆ ದೊರಯದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಸೋಂಕಿಗೊಳಗಾದ ಜನರು ಆಸ್ಪತ್ರೆಯಿಂದ ಆಸ್ಪತ್ರೆಗೆ ಹೋಗಿ ಹಾಸಿಗೆಗಳಿಗಾಗಿ ಹುಡುಕಾಡುತ್ತಿದ್ದಾರೆ. ಕೆಲವು ಪ್ರಕರಣಗಳಲ್ಲಂತೂ ಸೂಕ್ತ ಸಮಯಕ್ಕೆ ಹಾಸಿಗೆ ದೊರಕದೆ ಸಾವುಗಳೂ ಸಂಭವಿಸಿವೆ. ಹೀಗಾಗಿ ಸಾರ್ವಜನಿಕರಿಗೆ ಖಾಸಗಿ ಆಸ್ಪತ್ರೆಗಳಲ್ಲಿರುವ ಹಾಸಿಗೆ ಲಭ್ಯತೆ ಕುರಿತು ಮಾಹಿತಿ ನೀಡಲು ವೆಬ್'ಸೈಟ್ ಆರಂಭಿಸಲು ನಿರ್ಧರಿಸಿದ್ದೇವೆ. ಈ ವೆಬ್'ಸೈಟ್ ಮೂಲಕ ಮಾಹಿತಿ ಪಡೆಯುವ ಜನರು ನೇರವಾಗಿ ಆಸ್ಪತ್ರೆಗಳಿಗೆ ಬಂದು ದಾಖಲಾಗಬಹುದು. ಇದರಿಂದ ರೋಗಿಗಳು ಅನಗತ್ಯವಾಗಿ ಸಮಯ ವ್ಯರ್ಥ ಮಾಡುವುದು ನಿಯಂತ್ರಣಗೊಳ್ಳಲಿದೆ ಎಂದು ಹೇಳಿದ್ದಾರೆ. 

ಪೋರ್ಟಲ್ ಅನ್ನು ನಾಲೆಡ್ಜ್ ಲೆನ್ಸ್ ಅಭಿವೃದ್ಧಿಪಡಿಸಿದ್ದು, ಈ ವರೆಗೂ 300 ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಗಳ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡಿವೆ. "ಖಾಸಗಿ ಆಸ್ಪತ್ರೆಗಳಲ್ಲಿ 7,000 ಕ್ಕೂ ಹೆಚ್ಚು ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ವೆಬ್ ಸೈಟ್ ನಲ್ಲಿ ಮಾಹಿತಿ ಪ್ರಕಟಿಸುವುದರಿಂದ ಮೀಸಲಾತಿ ಹಾಸಿಗೆಗಳ ಕುರಿತ ಮಾಹಿತಿಗಳೂ ಇರುವುದರಿಂದ ಪಾರದರ್ಶಕತೆ ಹೆಚ್ಚಾಗುವಂತೆ ಮಾಡಲಿದೆ. ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್‌ ಹೋಂ ಅಸೋಸಿಯೇಷನ್‌ ಅಡಿಯಲ್ಲಿರುವ ಆಸ್ಪತ್ರೆಗಳಷ್ಟೇ ಅಲ್ಲದೆ, ಇತರೆ ಆಸ್ಪತ್ರೆಗಳು ನೊಂದಾವಣಿ ಮಾಡಿಕೊಳ್ಳುವಂತೆ ನಾವು ಬಯಸುತ್ತೇವೆ. ವೆಬ್ ಸೈಟ್ ನಲ್ಲಿ 20ಕ್ಕೂ ಹೆಚ್ಚು ಸ್ವಯಂಸೇವಕರು ಕಾರ್ಯನಿರ್ವಹಿಸಲಿದ್ದಾರೆ ಫಾನಾ ಕಾರ್ಯದರ್ಶಿ ಡಾ.ರಾಜಶೇಕರ್ ವೈಎಲ್ ತಿಳಿಸಿದ್ದಾರೆ.

ವೆಬ್ ಸೈಟ್ ಯಾವಾಗ ಕಾರ್ಯನಿರ್ವಹಿಸಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ವೆಬ್ ಸೈಟ್ ಇದೀಗ ಪರೀಕ್ಷೆಯ ಹಂತದಲ್ಲಿದೆ. ಎಲ್ಲಾ ತಾಂತ್ರಿಕ ಸಮಸ್ಯೆಗಳೂ ಬಗೆಹರಿದ ಕೂಡಲೇ ಕಾರ್ಯ ಆರಂಭಿಸಲಿದೆ. ಮಾಹಿತಿಗಳನ್ನು ಯಾವ ರೀತಿ ಅಪ್'ಡೇಟ್ ಮಾಡಬೇಕೆಂಬುದರ ಕುರಿತು ಆಸ್ಪತ್ರೆಗಳಿಗೆ ತರಬೇತಿ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com