ಅನಗತ್ಯವಾಗಿ ಓಡಾಡಿದರೆ ವಾಹನ ಸೀಜ್: ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ

ಬೆಳಗ್ಗೆ 10 ಗಂಟೆ ಬಳಿಕ ಯಾವುದೇ ಅಂಗಡಿ ತೆರೆದಿರುವುದಿಲ್ಲ, ಕರ್ಫ್ಯೂ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ತಿಳಿಸಿದ್ದಾರೆ.
ಪೊಲೀಸ್ ಆಯುಕ್ತ ಕಮಲ್ ಪಂತ್
ಪೊಲೀಸ್ ಆಯುಕ್ತ ಕಮಲ್ ಪಂತ್

ಬೆಂಗಳೂರು: ಬೆಳಗ್ಗೆ 10 ಗಂಟೆ ಬಳಿಕ ಯಾವುದೇ ಅಂಗಡಿ ತೆರೆದಿರುವುದಿಲ್ಲ, ಕರ್ಫ್ಯೂ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಆದೇಶ ಹೊರಡಿಸಿರುವ ಪ್ರಕಾರ ಇಂದು ರಾತ್ರಿ 9 ಗಂಟೆಯಿಂದ ಹೊಸ ಗೈಡ್‍ಲೈನ್ಸ್ ಜಾರಿಯಾಗಲಿದೆ. ಬೆಳಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಇದೆ. ಮತ್ತೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ ಆರು ಗಂಟೆವರೆಗೂ ನೈಟ್ ಕರ್ಫ್ಯೂ ಜಾರಿ ಇರುತ್ತೆ. ಬೆಳಗ್ಗೆ 10 ಗಂಟೆ ಬಳಿಕ ಯಾವುದೇ ಅಂಗಡಿಗಳು ತೆರೆದಿರುವುದಿಲ್ಲ. ಹೋಮ್ ಡೆಲಿವರಿ, ಇ ಕಾಮರ್ಸ್ ಗೆ ಅವಕಾಶ ಇದೆ. ಬಾರ್, ಪಬ್ ಗಳಲ್ಲಿ ಪಾರ್ಸಲ್ ಗೆ ಅವಕಾಶ ಇದೆ. ಬೆಳಗ್ಗೆ ಹತ್ತು ಗಂಟೆ ಬಳಿಕ ಯಾವುದೇ ಅಂಗಡಿ ಓಪನ್ ಇರಲ್ಲ ಎಂದು ಹೇಳಿದ್ದಾರೆ. 

ದೇವಸ್ಥಾನ ಗಳನ್ನೂ ಬಂದ್ ಮಾಡಿಸಲಾಗಿದೆ. ಪ್ರಯಾಣಿಕರು ರಸ್ತೆಗಳಲ್ಲಿ ಸಂಚಾರ ಮಾಡುವಾಗ ಟ್ರಾವೆಟ್ ಟಿಕೆಟ್ ತೋರಿಸಬೇಕು. ಹೊರ ರಾಜ್ಯಗಳಿಗೆ ಹೋಗಲು ಅವಕಾಶ ಇದೆ. ಅನುಮತಿ ಇರುವ ಕಂಪನಿ ಉದ್ಯೋಗಿಗಳು ಐಡಿ ಕಾರ್ಡ್ ತೋರಿಸುವುದು ಕಡ್ಡಾಯವಾಗಿದೆ. ಅವಕಾಶ ದುರುಪಯೋಗ ಮಾಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ. 

ಮದುವೆಗೆ 50 ಮಂದಿಗೆ ಮಾತ್ರ ಅವಕಾಶವಿದೆ. ವಿಮಾನ ನಿಲ್ದಾಣಕ್ಕೆ ಹೋಗುವರಿಗೆ ಅವಕಾಶವಿದೆ. ನೈಟ್ ಪಾಳಿಯ ಐಟಿ ಉದ್ಯೋಗಿಗಳು ಐಡಿ ಕಾರ್ಡ್ ಇರಬೇಕು. ಮೇ 12ರ ವೆರೆಗೆ ಕೋವಿಡ್ ರೂಲ್ಸ್ ಫಾಲೋ ಮಾಡಬೇಕು ಎಂದು ತಿಳಿಸಿದರು.

ರೈತರಿಗೆ ಯಾವುದೇ ಸಮಸ್ಯೆ ಇಲ್ಲ, ಗೂಡ್ಸ್ ವಾಹನಗಳಿಗೆ ಅವಕಾಶ ಇದೆ. ಹೂ ಹಣ್ಣು, ತರಕಾರಿ ಮಾರುಕಟ್ಟೆಗೆ ತರಲು ಸಮಸ್ಯೆ ಇಲ್ಲ. ಮದುವೆಗೆ ಬಿಬಿಎಂಪಿಯಿಂದ ಅನುಮತಿ ಪಡೆಯಬೇಕು. ನಾವು ಕ್ಲಿಯರೆನ್ಸ್ ಕೊಡುತ್ತೇವೆ. ಅಗತ್ಯ ವಸ್ತುಗಳ ಖರೀದಿ ವೇಳೆ ಸಾಮಾಜಿಕ ಅಂತರ ಕಾಪಾಡುವುದು ಆ ಅಂಗಡಿ ಮಾಲೀಕರದ್ದೇ ಜವಾಬ್ದಾರಿಯಾಗಿದೆ. ಕೆ.ಆರ್.ಮಾರ್ಕೆಟ್‍ನಲ್ಲಿ ನಿಯಮ ಪಾಲನೆ ಆಗುತ್ತಿಲ್ಲ. 

ಈ ಬಗ್ಗೆ ಬಿಬಿಎಂಪಿ ಆಯುಕ್ತರ ಜೊತೆ ಮಾತನಾಡುತ್ತೇವೆ. ವೀಕೆಂಡ್ ಕರ್ಫ್ಯೂ ಯಾವ ರೀತಿ ಸಿದ್ಧತೆ ಇತ್ತೋ ಅದೇ ರೀತಿ ಹದಿನೈದು ದಿನ ಇರುತ್ತೆ. ಅನಗತ್ಯವಾಗಿ ಓಡಾಡಿದರೆ ಗಾಡಿ ಸೀಜ್ ಮಾಡಲಾಗುತ್ತದೆ. ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

ಇನ್ನು ಲಸಿಕೆ ಹಾಕಿಸಿಕೊಳ್ಳುವವರಿಗೆ ರಸ್ತೆಗಳಲ್ಲಿ ಸಂಚಾರ ಮಾಡಲು ಅನುಮತಿ ನೀಡಲಾಗಿದೆ. ಆದರೆ, ಇದಕ್ಕೆ ದಾಖಲಾತಿಯಾಗಿ ನೋಂದಣಿ ಮಾಡಿಕೊಂಡಿರುವ ಪತ್ರವನ್ನು ದಾಖಲೆಯಾಗಿ ತೋರಿಸಬೇಕು ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com