ಮೈಸೂರು: ಕುಡಿದ ಅಮಲಿನಲ್ಲಿ ತಾಯಿ, ಪತ್ನಿ, ಇಬ್ಬರು ಮಕ್ಕಳನ್ನು ಕೊಂದ ವ್ಯಕ್ತಿ!

ಕುಡಿದ ಅಮಲಿನಲ್ಲಿ ವ್ಯಕ್ತಿ ಓರ್ವ ತನ್ನ ತಾಯಿ, ಗರ್ಭಿಣಿ ಪತ್ನಿ, ಇಬ್ಬರೂ ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯ ಸರಗೂರು ತಾಲೂಕಿನ ಸ್ವಾಮಿಗೌಡನಹುಂಡಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮೈಸೂರು: ಕುಡಿದ ಅಮಲಿನಲ್ಲಿ ವ್ಯಕ್ತಿ ಓರ್ವ ತನ್ನ ತಾಯಿ, ಗರ್ಭಿಣಿ ಪತ್ನಿ, ಇಬ್ಬರೂ ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯ ಸರಗೂರು ತಾಲೂಕಿನ ಸ್ವಾಮಿಗೌಡನಹುಂಡಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದ್ದು, ಜನ ಬೆಚ್ಚಿಬಿದ್ದಿದ್ದಾರೆ.

ತಾಯಿ ಕೆಂಪನಂಜಮ್ಮ(60), ಗರ್ಭಿಣಿ ಪತ್ನಿ ಗಂಗಾ(28), ಪುತ್ರರಾದ ರೋಹಿತ್ (4) ಮತ್ತು ಸಾಮ್ರಾಟ್ (4) ಕೊಲೆಯಾದವರು. ಆರೋಪಿ ಮಣಿಕಂಠಸ್ವಾಮಿ ಮದ್ಯ ಸೇವಿಸಿ ಕಬ್ಬಿಣದ ರಾಡ್‌ನಿಂದ ಹೊಡೆದು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಮಣಿಕಂಠಸ್ವಾಮಿ ಕೊಲೆ ಮಾಡಿದ ಬಳಿಕ ಘಟನಾ ಸ್ಥಳದಿಂದ ತಲೆಮರೆಸಿಕೊಂಡಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪಿಎಸ್‍ಐ ದಿವ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸದ್ಯ ಮೃತದೇಹಗಳು ಮ‌ನೆಯ ಒಳಗಿದ್ದು, ಆರೋಪಿಯನ್ನು ಬಂಧಿಸುವವರೆಗೂ ಮೃತದೇಹಗಳನ್ನು ಅಂತ್ಯಸಂಸ್ಕಾರಕ್ಕೆ ತೆಗೆದುಕೊಂಡು ಹೋಗಲು ಬಿಡುವುದಿಲ್ಲ ಎಂದು ಮೃತ ಗಂಗಾ ಸಂಬಂಧಿಕರು ಪಟ್ಟುಹಿಡಿದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com