ನಂದಿನಿ ಹಾಲಿನ ಮಳಿಗೆಗಳು ಬೆಳಗ್ಗೆ 6 ರಿಂದ ಸಂಜೆ 8 ರವರೆಗೆ ತೆರೆಯಲು ಸರ್ಕಾರ ಆದೇಶ

ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಹಾಲಿನ ಮಳಿಗೆಗಳು ಶುಕ್ರವಾರದಿಂದ ಬೆಳಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆವರೆಗೂ ತೆರೆಯಲು ಸರ್ಕಾರ ಆದೇಶಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಹಾಲಿನ ಮಳಿಗೆಗಳು ಶುಕ್ರವಾರದಿಂದ ಬೆಳಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆವರೆಗೂ ತೆರೆಯಲು ಸರ್ಕಾರ ಆದೇಶಿಸಿದೆ.

ಈ ಸಂಬಂಧ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ ಕರ್ಪ್ಯೂ ಘೋಷಣೆ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಸೇವೆಗಳಿಗೆ ಬೆಳಗ್ಗೆ 6 ರಿಂದ 10 ಗಂಟೆ ವರೆಗೆ ಮಾತ್ರ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರಿಂದ ನಂದಿನಿ ಹಾಲು ಮಾರಾಟ ಮಾಡಲು ಸಮಸ್ಯೆಯಾಗುತ್ತಿರುವುದರಿಂದ ಸಂಜೆ 8 ಗಂಟೆವರೆಗೂ ತೆರೆದಿಡಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com