2ನೇ ಡೋಸ್ ಕೋವಿಡ್-19 ಲಸಿಕೆ ಪಡೆದ ವಿಪಕ್ಷ ನಾಯಕ ಸಿದ್ದರಾಮಯ್ಯ

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುರುವಾರ 2ನೇ ಡೋಸ್  ಕೋವಿಡ್-19 ಲಸಿಕೆ ಪಡೆದುಕೊಂಡಿದ್ದಾರೆ. 
ಸಿದ್ದರಾಮಯ್ಯ ಲಸಿಕೆ ಪಡೆಯುತ್ತಿರುವ ಚಿತ್ರ
ಸಿದ್ದರಾಮಯ್ಯ ಲಸಿಕೆ ಪಡೆಯುತ್ತಿರುವ ಚಿತ್ರ

ಬೆಂಗಳೂರು:ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುರುವಾರ 2ನೇ ಡೋಸ್  ಕೋವಿಡ್-19 ಲಸಿಕೆ ಪಡೆದುಕೊಂಡಿದ್ದಾರೆ. 

ಮಾರ್ಚ್ 15 ರಂದು ಮೊದಲ ಡೋಸ್ ಕೋವಿಡ್-19 ಲಸಿಕೆ ಪಡೆದುಕೊಂಡಿದ್ದ ಸಿದ್ದರಾಮಯ್ಯ,ಗುರುವಾರ ಬೆಳಗ್ಗೆ  ವಿಕ್ಟೋರಿಯಾ ಆಸ್ಪತ್ರೆಗೆ ತೆರಳಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.

ಸಿದ್ದರಾಮಯ್ಯ ಅವರಿಗೂ ಕೋವಿಡ್‌ ಸೋಂಕು ತಗುಲಿತ್ತು. ನಂತರ ಆಸ್ಪತ್ರೆಗೆ ದಾಖಲಾಗಿ  ಚಿಕಿತ್ಸೆ ಪಡೆದುಕೊಂಡಿದ್ದರು. ಇದಾದ ಬಳಿಕ ಸಾಕಷ್ಟು ಎಚ್ಚರಿಕೆಯನ್ನು ವಹಿಸಿರುವ ಸಿದ್ದರಾಮಯ್ಯ, ಕೋವಿಡ್-19 ನಿರ್ವಹಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಕೋರಿ ಹಾಗೂ ಕೆಲವೊಂದಿಷ್ಟು ಸಲಹೆಗಳನ್ನು ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿನ್ನೆ ಪತ್ರ ಬರೆದಿದ್ದರು.

ಕೋವಿಡ್‌ ಲಸಿಕೆಯನ್ನು ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೂ ನೀಡಲು ಸರ್ಕಾರ ನಿರ್ಧರಿಸಿದ್ದು, ಈಗಾಗಲೇ ಆನ್‌ಲೈನ್ ಮೂಲಕ ನೋಂದಣಿ ಕಾರ್ಯ ನಡೆಯುತ್ತಿದೆ.ಬುಧವಾರ 4 ಗಂಟೆಯಿಂದ ನೋಂದಣಿ ಕಾರ್ಯ ಆರಂಭಗೊಂಡಿದ್ದು ಸುಮಾರು 70 ಲಕ್ಷಕ್ಕೂ ಅಧಿಕ ಮಂದಿ ನೋಂದಣಿ  ಮಾಡಿಸಿಕೊಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com