ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರ ಮುಂದುವರೆದಿದ್ದು ಇಂದು ದಾಖಲೆಯ 48,296 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಸೋಂಕಿತರ ಸಂಖ್ಯೆ 15,23,142ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 217 ಮಂದಿ ಸೋಂಕಿಗೆ ಬಲಿಯಾಗಿದ್ದು ಇದರೊಂದಿಗೆ ಸಾವಿನ ಸಂಖ್ಯೆ 15,523ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 26,756 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 7,56,740ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 93 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇಂದು 14,884 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 11,24,909ಕ್ಕೆ ಏರಿಕೆಯಾಗಿದೆ. ಇನ್ನು 3,82,690 ಸಕ್ರೀಯ ಪ್ರಕರಣಗಳಿವೆ.
Advertisement