ಮಂಗಳೂರು: ಕೋವಿಡ್-19 ನಿಯಮ ಉಲ್ಲಂಘಿಸಿದ ಕಾಲೇಜಿನ ವಿರುದ್ಧ ಪ್ರಕರಣ ದಾಖಲು

ಕೋವಿಡ್-19  ಸೋಂಕು ತಡೆಗೆ ರಾಜ್ಯಾದ್ಯಂತ ಏ.27 ರಿಂದ ಕರ್ಫ್ಯೂ ಜಾರಿಯಾಗಿದೆ. ಆದರೆ ಮಂಗಳೂರಿನ ವಲಚಿಲ್ ನಲ್ಲಿ ಕೋವಿಡ್-19 ನಿಯಮ ಉಲ್ಲಂಘನೆ ಮಾಡಿದ ಕಾಲೇಜಿನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 
ಕಾಲೇಜಿನ ವಿರುದ್ಧ ಪ್ರಕರಣ ದಾಖಲು (ಸಾಂಕೇತಿಕ ಚಿತ್ರ)
ಕಾಲೇಜಿನ ವಿರುದ್ಧ ಪ್ರಕರಣ ದಾಖಲು (ಸಾಂಕೇತಿಕ ಚಿತ್ರ)

ಮಂಗಳೂರು: ಕೋವಿಡ್-19  ಸೋಂಕು ತಡೆಗೆ ರಾಜ್ಯಾದ್ಯಂತ ಏ.27 ರಿಂದ ಕರ್ಫ್ಯೂ ಜಾರಿಯಾಗಿದೆ. ಆದರೆ ಮಂಗಳೂರಿನ ವಲಚಿಲ್ ನಲ್ಲಿ ಕೋವಿಡ್-19 ನಿಯಮ ಉಲ್ಲಂಘನೆ ಮಾಡಿದ ಕಾಲೇಜಿನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 

ಎಪಿಡಮಿಕ್ ಡಿಸೀಸಸ್ ಕಾಯ್ದೆಯಡಿ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ರಾಜ್ಯಾದ್ಯಂತ ಹಲವು ನಿರ್ಬಂಧಗಳು ಜಾರಿಯಲ್ಲಿದೆ. ಆದರೆ ಈ ಕಾಲೇಜು ಮಾತ್ರ ಎಂದಿನಂತೆ ತರಗತಿಗಳು ಸೇರಿ ಕ್ಯಾಂಪಸ್ ಒಳಗೆ ಹಲವು ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸುತ್ತಿತ್ತು. 

ಕೋವಿಡ್-19 2  ನೇ ಅಲೆಯಲ್ಲಿ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರೋಗಿಗಳು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವುದಕ್ಕೂ ಸಾಧ್ಯವಾಗದೇ ಪರದಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಏ.27 ರಿಂದ ಮೇ.12 ವರೆಗೆ ಕರ್ಫ್ಯೂ ವಿಧಿಸಲಾಗಿದೆ. ಏ.26 ರಂದು ಸಿಎಂ ಯಡಿಯೂರಪ್ಪ ಎರಡು ವಾರಗಳ ಕಾಲ ಕರ್ಫ್ಯೂ ಘೋಷಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com