ಪಡಿತರ ಅಕ್ಕಿ ಇಳಿಕೆ: ಕಾಂಗ್ರೆಸ್ ನಿಂದ ಪೋಸ್ಟ್ ಕಾರ್ಡ್ ಅಭಿಯಾನ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಆಹಾರ ಧಾನ್ಯಗಳ ಪ್ರಮಾಣವನ್ನು 5 ಕೆಜಿಯಿಂದ 2 ಕೆಜಿಗೆ ಕಡಿತಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಪೋಸ್ಟ್‌ ಕಾರ್ಡ್ ಅಭಿಯಾನ ಪ್ರಾರಂಭಿಸಲು ಕಾಂಗ್ರೆಸ್ ಯೋಜಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮೈಸೂರು: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಆಹಾರ ಧಾನ್ಯಗಳ ಪ್ರಮಾಣವನ್ನು 5 ಕೆಜಿಯಿಂದ 2 ಕೆಜಿಗೆ ಕಡಿತಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಪೋಸ್ಟ್‌ ಕಾರ್ಡ್ ಅಭಿಯಾನ ಪ್ರಾರಂಭಿಸಲು ಕಾಂಗ್ರೆಸ್ ಯೋಜಿಸಿದೆ.

ಮೈಸೂರಿನಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಅಕ್ಕಿ ಕಡಿಮೆ ಮಾಡಿರುವುದಕ್ಕೆ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಮುಖ್ಯಮಂತ್ರಿಯವರ ಗಮನ ಸೆಳೆಯಲು ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಪೋಸ್ಟ್ ಕಾರ್ಡ್ ಅಭಿಯಾನ ಆರಂಭಿಸುವುದಾಗಿ ಹೇಳಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರ ಅನ್ನಭಾಗ್ಯದ ಅಕ್ಕಿಯನ್ನ 7 ರಿಂದ 5 ಕೆಜಿಗೆ ಹಾಗೂ ಕೊರೊನ ಸಂಕಷ್ಟದ ‌ಸಮಯದಲ್ಲೂ ಅಕ್ಕಿಯನ್ನು 5 ರಿಂದ 2 ಕೆಜಿಗೆ ಕಡಿತಗೊಳಿಸಿದ್ದನ್ನು ಖಂಡಿಸಿ, ಅಕ್ಕಿ ಕೇಳಿದ ರೈತನನ್ನು 'ಸತ್ತು ಹೋಗು' ಎಂದು ಹೇಳಿದ ಆಹಾರ ಸಚಿವ ಉಮೇಶ್ ಕತ್ತಿ ನಡವಳಿಕೆ ಖಂಡಿಸಿ, ಉಮೇಶ್ ಕತ್ತಿ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ, ಈ ಕೆಳಗಿನ ಹ್ಯಾಷ್‌ಟ್ಯಾಗ್ ಬಳಸಿ, ಅಭಿಯಾನ ಆರಂಭಿಸುವುದಾಗಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com